ಹುಬ್ಬಳ್ಳಿ: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಗೆಲುವು ಸಾಧಿಸುತ್ತದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಎಲ್ಪಿಜಿ ದರ ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ ಜನರಲ್ಲಿ ಅಸಮಾಧಾನ ಮೂಡಿದೆ. ಈ ಕಾರಣದಿಂದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಹೇಳಿದರು.
ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ “ಆಟೋ ಚಾಲಕರು ಗ್ಯಾಸ್ ಬಿಟ್ಟು ಪೆಟ್ರೋಲ್ ಬಳಸಿ” ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಇರಾನ್ನಿಂದ ಬಂದ ಎಲ್ಪಿಜಿ ಹಡಗುಗಳನ್ನು ಗುಜರಾತ್ಗೆ ಕಳುಹಿಸಿರುವುದನ್ನು ಪ್ರಶ್ನಿಸಿದರು.
ಮಂಗಳೂರು ಅಥವಾ ಕೇರಳಕ್ಕೆ ಕಳುಹಿಸಿದ್ದರೆ ರಾಜ್ಯಕ್ಕೆ ಅನುಕೂಲವಾಗುತ್ತಿತ್ತು. ಆದರೆ ಕೇಂದ್ರ ಸರ್ಕಾರ ಉತ್ತರ ಭಾರತಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ, ದಕ್ಷಿಣ ಭಾರತದ ಕಡೆ ಗಮನ ಹರಿಸುತ್ತಿಲ್ಲ ಎಂದು ಟೀಕಿಸಿದರು.



