ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
ಎಸ್, ರಾಜ್ಯ ಬಿಜೆಪಿ ಶಾಸಕರಾದ ಮುನಿರಾಜು, ಸಿಕೆ ರಾಮಮೂರ್ತಿ ನಿಯೋಗ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ ಎಂ.ಸಲೀಂ ಅವರಿಗೆ ದೂರು ಕೊಟ್ಟಿದ್ದಾರೆ. ಹತ್ಯೆಗೆ ಪ್ರಚೋದನಾಕಾರಿ ಭಾಷಣ ಮಾಡಿರುವ ಖರ್ಗೆ ಅವರನ್ನು ಕೂಡಲೇ ಬಂಧಿಸುವಂತೆ ಬಿಜೆಪಿಗರು ಒತ್ತಾಯಿಸಿದ್ದಾರೆ.



