ಶಿವಮೊಗ್ಗ: ತುಂಗಾ ನದಿಯಲ್ಲಿ ಈಜಲು ಹೋಗಿ ಕಣ್ಮರೆಯಾಗಿದ್ದ ಯುವಕನ ಶವ ಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿಯಾಗಿದೆ.
ಮೃತ ಯುವಕನನ್ನು ಸೀಬಿನಕೆರೆ ಗ್ರಾಮದ ಅಕ್ಷಯ್ (26) ಎಂದು ಗುರುತಿಸಲಾಗಿದೆ. ಏಪ್ರಿಲ್ 7ರ ಸಂಜೆ ಕಲ್ಲುಬಂಡೆಯ ಮೇಲೆ ಮೊಬೈಲ್, ಚಪ್ಪಲಿ ಹಾಗೂ ಬಟ್ಟೆಗಳನ್ನು ಇಟ್ಟು ನದಿಗೆ ಇಳಿದಿದ್ದ ಅಕ್ಷಯ್, ಬಳಿಕ ಕಾಣೆಯಾಗಿದ್ದರು.
ಘಟನೆಯ ಮಾಹಿತಿ ತಿಳಿದ ಕೂಡಲೇ ಮುಳುಗು ತಜ್ಞ ಈಶ್ವರ್ ಮಲ್ಪೆ ನೇತೃತ್ವದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ನದಿಗೆ ಇಳಿದಿದ್ದ ಸ್ಥಳದ ಸಮೀಪದಲ್ಲೇ ಕೆಲವೇ ಅಡಿ ದೂರದಲ್ಲಿ ಶವ ಪತ್ತೆಯಾಗಿದೆ.
ಮೃತದೇಹವನ್ನು ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.



