ಬೆಂಗಳೂರು: ಯಲಹಂಕ ಉಪನಗರದ ಬಾಯ್ಸ್ ಹಾಸ್ಟೆಲ್ ಹಿಂಭಾಗದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಯಲಹಂಕ ಉಪನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಮತ್ತು ಆದೇಶ್ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳನ್ನು ಮುಹಮ್ಮದ್ ನಿಶಾದ್ ಮತ್ತು ಆದೇಶ್ ಎಂದು ಗುರುತಿಸಲಾಗಿದೆ. ಹಾಸ್ಟೆಲ್ ಹಿಂಭಾಗದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿ, ಹೊರ ರಾಜ್ಯಗಳಿಂದ ಕಡಿಮೆ ಬೆಲೆಗೆ ತಂದ ಗಾಂಜಾವನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುತ್ತಿದ್ದರೆಂದು ತನಿಖೆ ವೇಳೆ ಪತ್ತೆ ಹಿಡಿಯಲಾಗಿದೆ.
ಆರೋಪಿಗಳ ವಿರುದ್ಧ ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇಬ್ಬರೂ ಹೆಚ್ಚಿನ ವಿಚಾರಣೆಗೆ ಒಳಪಡಿಸಲ್ಪಟ್ಟಿದ್ದಾರೆ.



