HomeKarnataka Newsನೆಲಮಂಗಲ: ಬೆಂಕಿ ಅವಘಡದಿಂದ 18 ವರ್ಷದ ಹಳೆಯ ಗೋದಾಮು ಸಂಪೂರ್ಣ ಸುಟುಭಸ್ಮ!

ನೆಲಮಂಗಲ: ಬೆಂಕಿ ಅವಘಡದಿಂದ 18 ವರ್ಷದ ಹಳೆಯ ಗೋದಾಮು ಸಂಪೂರ್ಣ ಸುಟುಭಸ್ಮ!

For Dai;y Updates Join Our whatsapp Group

Spread the love

ನೆಲಮಂಗಲ: ನೆಲಮಂಗಲದ ಅಡಕಮಾರನಹಳ್ಳಿಯಲ್ಲಿನ ಆಹಾರ ಸಂಗ್ರಹ ಗೋದಾಮಿನಲ್ಲಿ ಬುಧವಾರ ರಾತ್ರಿ ಭೀಕರ ಬೆಂಕಿ ಅವಘಡ ಸಂಭವಿಸಿದೆ.

ಈ ಘಟನೆಯಾಗಿದ್ದ ಸ್ಥಳ ಆಂಜನೇಯ ದೇಗುಲದ ಬಳಿ ಇದ್ದು, ಗೋದಾಮಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಹಾರ ಪದಾರ್ಥಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಸ್ಥಳಕ್ಕೆ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ನೆಲಮಂಗಲ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಕೈಗೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆ ಪ್ರಕಾರ, ರಾತ್ರಿ ಸುಮಾರು 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಪ್ರಾಥಮಿಕ ವರದಿಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿದುರಂತ ಸಂಭವಿಸಿರಬಹುದು ಎಂದು ತಿಳಿಸಲಾಗಿದೆ.

ಈ ಗೋದಾಮು 18 ವರ್ಷಗಳ ಹಿಂದೆ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ರಾತ್ರಿ ವೇಳೆ ಘಟನೆ ಸಂಭವಿಸಿದ ಕಾರಣ ಯಾವುದೇ ಕಾರ್ಮಿಕರು ಸ್ಥಳದಲ್ಲಿ ಇರಲಿಲ್ಲ. ಹೀಗಾಗಿ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳಾಗಿಲ್ಲ ಎಂದು ಗೋದಾಮಿನ ಮಾಲಿಕ ಪದ್ಮರಾಜ್ ತಿಳಿಸಿದ್ದಾರೆ.

ಈ ಬೆಂಕಿ ಅವಘಡವು ಹಠಾತ್‌ಅಪಘಾತವಾಗಿದ್ದರೂ, ಅದರಿಂದ ಯಾವುದೇ ಮಾನವ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!