ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದ ಕಾಮುಕನನ್ನು ಕೊನೆಗೂ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅಮೃತ್ ಬಿನ್ ಮಹೇಶ್ (24) ಬಂಧಿತ ಆರೋಪಿ. ಆರೋಪಿಯು ಮಹಿಳೆಯಂತೆ ಬಟ್ಟೆ ಧರಿಸಿ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಕಾಲೊನಿ, ಇಂದಿರಾನಗರ ಮತ್ತು ಕರಿನಂಜನಪುರ ಬಡಾವಣೆಗಳಲ್ಲಿ ಮಧ್ಯರಾತ್ರಿ ವೇಳೆ ಮನೆಯ ಮುಂಭಾಗದಲ್ಲಿ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಈ ಬಗ್ಗೆ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದರು.
ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದೇವೆ. ಈ ವಿಶೇಷ ತಂಡದ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕ ಮುತ್ತುರಾಜು.ಎಂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.



