HomeKarnataka Newsರಸ್ತೆ ಅಗಲೀಕರಣ ವೇಳೆ ದುರಂತ: ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ!

ರಸ್ತೆ ಅಗಲೀಕರಣ ವೇಳೆ ದುರಂತ: ಗುಡ್ಡ ಕುಸಿದು ಮೂವರು ಕಾರ್ಮಿಕರು ದುರ್ಮರಣ!

For Dai;y Updates Join Our whatsapp Group

Spread the love

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್‌ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ವೇಳೆ ಭಾರೀ ದುರ್ಘಟನೆ ಸಂಭವಿಸಿದ್ದು, ಗುಡ್ಡ ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಮೃತರನ್ನು ರಾಘವೇಂದ್ರ (37), ರಾಜು (30) ಮತ್ತು ಶಬ್ಬೀರ್ (40) ಎಂದು ಗುರುತಿಸಲಾಗಿದೆ.

ಕುಂದಾಪುರ–ಶಿವಮೊಗ್ಗ ಹೆದ್ದಾರಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯ ಸಂದರ್ಭ ಈ ಘಟನೆ ನಡೆದಿದ್ದು, ಒಬ್ಬ ಹೊರ ರಾಜ್ಯದ ಕಾರ್ಮಿಕ ಸಹಿತ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಂತ ಮತ್ತು ಪರಮೇಶ್ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯ ತಕ್ಷಣ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ರಾತ್ರಿ ಸಮಯದ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹೊಸನಗರ ತಹಶೀಲ್ದಾರ್ ಭರತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ದುರ್ಘಟನೆಯ ಪರಿಣಾಮವಾಗಿ ಕುಂದಾಪುರ–ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!