ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ದ್ವಿತೀಯ ಪಿಯುಸಿ ಮೊದಲ ಪರೀಕ್ಷೆಯ ಫಲಿತಾಂಶವನ್ನು ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ಇದರೊಂದಿಗೆ ಫೇಲಾದ ವಿದ್ಯಾರ್ಥಿಗಳಿಗೆ ಎರಡನೇ ಪರೀಕ್ಷೆಯ ದಿನಾಂಕವನ್ನು ಸಹ ಘೋಷಿಸಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2 ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪರೀಕ್ಷೆಗಳು ಏಪ್ರಿಲ್ 30ರಿಂದ ಮೇ 13ರವರೆಗೆ ನಡೆಯಲಿವೆ. ಈ ಮೂಲಕ ವಿದ್ಯಾರ್ಥಿಗಳಿಗೆ ತಮ್ಮ ಫಲಿತಾಂಶವನ್ನು ಸುಧಾರಿಸಿಕೊಳ್ಳಲು ಮತ್ತೊಂದು ಅವಕಾಶ ಕಲ್ಪಿಸಲಾಗಿದೆ.
ಪರೀಕ್ಷೆ-2 ಬಹುತೇಕ ವಿಷಯಗಳಿಗೆ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದ್ದು, ಕೆಲವು ತಾಂತ್ರಿಕ ಹಾಗೂ ವೃತ್ತಿಪರ ವಿಷಯಗಳಿಗೆ ಮಧ್ಯಾಹ್ನ ವೇಳೆಯಲ್ಲಿ ಪರೀಕ್ಷೆಗಳು ನಿಗದಿಯಾಗಿವೆ. ಈ ಬಾರಿ ಮೂರನೇ ಪರೀಕ್ಷೆ (Exam-3) ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ.
ಪರೀಕ್ಷೆ-2 ವೇಳಾಪಟ್ಟಿ:
ಏಪ್ರಿಲ್ 30 – ಕನ್ನಡ, ಅರೇಬಿಕ್
ಮೇ 02 – ಐಚ್ಛಿಕ ಕನ್ನಡ, ತರ್ಕಶಾಸ್ತ್ರ, ರಸಾಯನಶಾಸ್ತ್ರ
ಮೇ 04 – ಇಂಗ್ಲೀಷ್
ಮೇ 05 – ವ್ಯವಹಾರ ಅಧ್ಯಯನ, ಗೃಹಶಾಸ್ತ್ರ, ಶಿಕ್ಷಣಶಾಸ್ತ್ರ
ಮೇ 06 – ಅರ್ಥಶಾಸ್ತ್ರ, ಜೀವಶಾಸ್ತ್ರ
ಮೇ 07 – ಇತಿಹಾಸ, ಗಣಿತ, ಭೌತಶಾಸ್ತ್ರ
ಮೇ 08 – ರಾಜ್ಯಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 09 – ಹಿಂದಿ
ಮೇ 11 – ಸಮಾಜಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 12 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೂಗರ್ಭಶಾಸ್ತ್ರ, ಮೂಲ ಗಣಿತ
ಮೇ 13 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಮೇ 13 (ಮಧ್ಯಾಹ್ನ) – ಹಿಂದೂಸ್ತಾನಿ ಸಂಗೀತ, ಎಲೆಕ್ಟ್ರಾನಿಕ್ಸ್, ಯಂತ್ರಾಂಶ, ಉಡುಪು ತಯಾರಿಕೆ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ, ಬ್ಯೂಟಿ & ವೆಲ್ನೆಸ್
ಇದೇ ವೇಳೆ, ದ್ವಿತೀಯ ಪಿಯುಸಿ ಪರೀಕ್ಷೆ-1 ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯಾದ್ಯಂತ 1217 ಕೇಂದ್ರಗಳಲ್ಲಿ ನಡೆದಿತ್ತು. ಒಟ್ಟು 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಸೈನ್ಸ್ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.



