ಲಕ್ಷ್ಮೇಶ್ವರ: ಮಹಿಳೆಯರಿಂದಲೇ ನಡೆಸಲ್ಪಡುವ ಈ ಭಾಗದ ಪ್ರಮುಖ ಶಿಕ್ಷಣ ಸಂಸ್ಥೆಯಾಗಿರುವ ಪಟ್ಟಣದ ತಾಯಿ ಪಾರ್ವತಿ ಮಕ್ಕಳ ಬಳಗದ ಎಸ್.ಎಂ.ಜೆ.ವಿ.ಜಿ ಕಲಾ ಮತ್ತು ವಾಣಿಜ್ಯ ಮಹಿಳಾ ಪಿಯು ಕಾಲೇಜು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದು, ಸಂಸ್ಥೆಗೆ ಕೀರ್ತಿ ತಂದಿದೆ.
ಕಲಾ ವಿಭಾಗದಲ್ಲಿ ರೋಹಿಣಿ ಪಿ. ಬೆಟಗೇರಿ ಶೇ. 97.33 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಹಾಗೂ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ನಂದಿತಾ ಐ. ಬಳಿಗಾರ ಶೇ. 96.66 ಅಂಕಗಳೊಂದಿಗೆ ಜಿಲ್ಲೆಗೆ ತೃತೀಯ ಸ್ಥಾನ ಪಡೆದಿದ್ದಾಳೆ. ಗೀತಾ ಎಂ. ಹಿರೇಮಠ ಶೇ. 95 ಅಂಕಗಳನ್ನು ಗಳಿಸಿ ಉತ್ತಮ ಸಾಧನೆ ತೋರಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಸಹನಾ ಬಿ. ಶೀಶನಳ್ಳಿ ಶೇ. 92.50, ನಂದಿತಾ ಎಸ್. ನಾಗಲೋಟಿ ಶೇ. 91.83 ಹಾಗೂ ಜ್ಯೋತಿ ಎಂ. ಬಕ್ಸದ್ ಶೇ. 89.50 ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಇದಲ್ಲದೆ ರೋಹಿಣಿ ಬೆಟಗೇರಿ ಕನ್ನಡ, ಇತಿಹಾಸ ಮತ್ತು ಭೂಗೋಳಶಾಸ್ತ್ರ ವಿಷಯಗಳಲ್ಲಿ ನೂರಕ್ಕೆ ನೂರು ಅಂಕಗಳನ್ನು ಗಳಿಸಿರುವುದು ವಿಶೇಷವಾಗಿದೆ. ನಂದಿತಾ ಬಳಿಗಾರ ಕೂಡ ಕನ್ನಡ ವಿಷಯದಲ್ಲಿ ನೂರಕ್ಕೆ ನೂರು ಅಂಕಗಳನ್ನು ಪಡೆದು ವಿಶಿಷ್ಟ ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ತಾಯಿ ಪಾರ್ವತಿ ಮಕ್ಕಳ ಬಳಗದ ಅಧ್ಯಕ್ಷೆ ಸುವರ್ಣಬಾಯಿ ಬಹದ್ದೂರದೇಸಾಯಿ, ಉಪಾಧ್ಯಕ್ಷೆ ಜಯಲಕ್ಷ್ಮಿ ಮಹಾಂತಶೆಟ್ಟರ, ಕಾರ್ಯದರ್ಶಿ ಜಯಲಕ್ಷ್ಮಿ ಗಡ್ಡದೇವರಮಠ, ಪ್ರಾಚಾರ್ಯ ಸರಸ್ವತಿ ಹುಲ್ಲಣ್ಣವರ ಹಾಗೂ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.



