ಗದಗ: ನಗರದ ಮನೋರಮಾ ಸ್ವತಂತ್ರ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ದಾಖಲಿಸಿ ಗಮನ ಸೆಳೆದಿದೆ. ಈ ಬಾರಿ ಕಾಲೇಜು ಒಟ್ಟು 72% ಫಲಿತಾಂಶ ಸಾಧಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಣ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಪರೀಕ್ಷೆಯಲ್ಲಿ ಐಶ್ವರ್ಯ ಅವರು 94.33% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದರೆ, ವಿಜಯಲಕ್ಷ್ಮಿ ಪೋಲಿಸ್ ಪಾಟೀಲ 94% ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚಿನ್ನು ಪೂಜಾರ 92.5% ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದರೆ,
ಐಶ್ವರ್ಯ ಶಿದ್ಲೀಂಗ 89% ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದಿದ್ದಾರೆ. 7 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ನಲ್ಲಿ, 16 ವಿದ್ಯಾರ್ಥಿಗಳು ಪ್ರಥಮ ವರ್ಗದಲ್ಲಿ ಹಾಗೂ 13 ವಿದ್ಯಾರ್ಥಿಗಳು ದ್ವಿತೀಯ ವರ್ಗದಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಎನ್. ಎಂ. ಕುಡತರಕರ, ಪ್ರಾಚಾರ್ಯ ಬಿ. ಎಸ್. ಹಿರೇಮಠ, ಕಾರ್ಯದರ್ಶಿ ಮಂಜುನಾಥ ಕುಡತರಕರ, ಆಡಳಿತಾಧಿಕಾರಿ ಕಿಶೋರ ಮುದಗಲ್ಲ, ನಿರ್ದೇಶಕರಾದ ಸಂಜಯ ಕುಡತರಕರ, ಚೇತನ ಕುಡತರಕರ ಹಾಗೂ ಪಿಯುಸಿ ವಿಭಾಗದ ಸಂಯೋಜಕಿ ಶಾಹೀದಾ ಶಿರಹಟ್ಟಿ ಸೇರಿದಂತೆ ಸಿಬ್ಬಂದಿ ವರ್ಗ ಶ್ಲಾಘಿಸಿದ್ದಾರೆ.



