HomeBengaluru NewsRain Alert: ರಾಜ್ಯದಲ್ಲಿ ಇಂದು-ನಾಳೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ!

Rain Alert: ರಾಜ್ಯದಲ್ಲಿ ಇಂದು-ನಾಳೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ!

For Dai;y Updates Join Our whatsapp Group

Spread the love

ಬೆಂಗಳೂರು:  ರಾಜ್ಯದ ಹಲವು ಭಾಗಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ನಡುವೆಯೇ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಬೆಳಗಾವಿ, ಧಾರವಾಡ, ಮೈಸೂರು ಮತ್ತು ಗದಗ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಪ್ರದೇಶಗಳಲ್ಲಿ ಉಷ್ಣಾಂಶ ಇನ್ನಷ್ಟು ಏರಿಕೆಯಾಗಲಿದ್ದು, ದಕ್ಷಿಣ ಒಳನಾಡಿನ ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ತುಂತುರು ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಮಳೆಯ ಸಮಯದಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಇನ್ನೂ ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ತಾಪಮಾನ 36-37 ಡಿಗ್ರಿ ಸೆಲ್ಸಿಯಸ್ ಮಟ್ಟದಲ್ಲಿರಲಿದೆ. ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ನಗರದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸುಮಾರು 30% ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!