ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದರೆ, ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ದೇವಸ್ಥಾನ ಭೇಟಿ ಮೂಲಕ ‘ಟೆಂಪಲ್ ರನ್’ ನಡೆಸಿದ್ದಾರೆ.
ಜಿಲ್ಲೆಯ ಎನ್.ಆರ್.ಪುರದಲ್ಲಿ ಸಿಎಂ ದಂಪತಿ ವಾಸ್ತವ್ಯ ಹೂಡಿದ್ದರು. ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆಗೆ ಪಾರ್ವತಿ ಸಿದ್ದರಾಮಯ್ಯ ಅವರು ಹೊರನಾಡಿನ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಬಳಿಕ ಶೃಂಗೇರಿಗೆ ತೆರಳಿ ಶಾರದಾಂಬೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪೂಜೆ ನಂತರ ಶಾರದಾಂಬೆ ದೇವಸ್ಥಾನದ ಮಠದಲ್ಲೇ ವಾಸ್ತವ್ಯ ಹೂಡಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಎನ್.ಆರ್.ಪುರದ ಐಬಿಯಲ್ಲಿ ತಂಗಿದ್ದರು.
ಇಂದು ಎನ್.ಆರ್.ಪುರ–ಶೃಂಗೇರಿ ತಾಲೂಕಿನಲ್ಲಿ ಸುಮಾರು 38 ಕೋಟಿ ರೂ. ವೆಚ್ಚದ ಸೇತುವೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಸಿಎಂ ದಂಪತಿ ವಾಪಸ್ಸಾಗಲಿದ್ದಾರೆ.



