ಬೆಳಗಾವಿ: ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಗರ್ಭದಲ್ಲಿದ್ದ ನವಜಾತ ಶಿಶು ಸಾವನ್ನಪ್ಪಿದ ಆರೋಪ ಕೇಳಿಬಂದಿದೆ.
ತುರಮರಿ ಗ್ರಾಮದ 21 ವರ್ಷದ ಈರಮ್ಮ ಶಿಗಿಹಳ್ಳಿ ಅವರನ್ನು ಏಪ್ರಿಲ್ 10ರಂದು ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಖಲಾದ ನಂತರ ಸಮರ್ಪಕ ಚಿಕಿತ್ಸೆ ನೀಡಲಿಲ್ಲ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಮಧ್ಯರಾತ್ರಿ ಸುಮಾರು 1.30ರ ಸುಮಾರಿಗೆ ಈರಮ್ಮ ಹಾಗೂ ಅವರ ಗರ್ಭದಲ್ಲಿದ್ದ ಹೆಣ್ಣು ಶಿಶು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಿರುವ ಕುಟುಂಬಸ್ಥರು ನ್ಯಾಯಕ್ಕಾಗಿ ಆಗ್ರಹಿಸಿ ಕಣ್ಣೀರಿಟ್ಟಿದ್ದಾರೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಎಪಿಎಂಸಿ ಸಿಪಿಐ ಉಸ್ಮಾನ್ ಅವಟಿ ಮತ್ತು ಪಿಎಸ್ಐ ಸರ್ದಾರ್ ಮುಟ್ಟತರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



