ಬೆಂಗಳೂರು: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣವು ಇದೀಗ ಹೊಸ ತಿರುವು ಪಡೆದಿದೆ. ಸ್ವಾಮೀಜಿಗಳ ವಿರುದ್ಧ ಆರೋಪ ಮಾಡಿದ್ದ ಮಹಿಳೆ ಇದೀಗ ಯು-ಟರ್ನ್ ಹೊಡೆದಿದ್ದಾರೆ.
ವಿಡಿಯೋ ರಿಲೀಸ್ ಮಾಡಿರುವ ಮಾಡಿರುವ ಅವರು, ನಾನು ಯಾವುದೇ ರೀತಿಯ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿಲ್ಲ. ನನ್ನ ಹಾಗೂ ಸ್ವಾಮೀಜಿಗಳ ನಡುವೆ ಗುರು–ಭಕ್ತಿಯ ಸಂಬಂಧ ಮಾತ್ರವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನನ್ನ ಹೆಸರಿನಲ್ಲಿ ಯಾರೋ ದೂರು ದಾಖಲಿಸಿದ್ದಾರೆ. ಅದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಏಪ್ರಿಲ್ 6ರಂದು ನೀಡಲಾಗಿದೆ ಎನ್ನಲಾಗುತ್ತಿರುವ ದೂರು ಸುಳ್ಳಾಗಿದೆ. ಅದನ್ನು ಯಾರೂ ನಂಬಬೇಡಿ ಎಂದು ಹೇಳಿದ್ದಾರೆ.
ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿರುವ ಮಹಿಳೆ, ನಾಲ್ಕು ದಿನಗಳ ಬಳಿಕ ಸಂಪೂರ್ಣ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದ್ದಾರೆ.



