HomeBengaluru Newsಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಬೆಂಗಳೂರು ಮೆಟ್ರೋ ಸೇವೆ ವಿಸ್ತರಣೆ!

ಐಪಿಎಲ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಬೆಂಗಳೂರು ಮೆಟ್ರೋ ಸೇವೆ ವಿಸ್ತರಣೆ!

For Dai;y Updates Join Our whatsapp Group

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಐಪಿಎಲ್ ಕ್ರೇಜ್ ಹೆಚ್ಚಾಗುತ್ತಿದ್ದಂತೆ ಕ್ರಿಕೆಟ್ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಿಹಿ ಸುದ್ದಿ ನೀಡಿದೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏಪ್ರಿಲ್ 15, 18 ಮತ್ತು 24ರಂದು ನಡೆಯಲಿರುವ ಐಪಿಎಲ್ ಪಂದ್ಯಗಳ ಹಿನ್ನೆಲೆಯಲ್ಲಿ ಮೆಟ್ರೋ ಸೇವೆ ಸಮಯವನ್ನು ವಿಸ್ತರಿಸಲಾಗಿದೆ. ಈ ದಿನಗಳಲ್ಲಿ ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ಹೆಚ್ಚುವರಿ ಮೆಟ್ರೋ ಸೇವೆ ಲಭ್ಯವಾಗಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಕೊನೆಯ ರೈಲುಗಳ ಸಮಯ ವಿವರ:
ವೈಟ್‌ಫೀಲ್ಡ್ ಮಾರ್ಗದಲ್ಲಿ ರಾತ್ರಿ 12:30ಕ್ಕೆ, ಚಲ್ಲಘಟ್ಟ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ಮಾರ್ಗಗಳಲ್ಲಿ ರಾತ್ರಿ 12:45ಕ್ಕೆ, ಬೊಮ್ಮಸಂದ್ರ ಮಾರ್ಗದಲ್ಲಿ ರಾತ್ರಿ 1 ಗಂಟೆಗೆ ಕೊನೆಯ ರೈಲು ಸಂಚಾರ ನಡೆಯಲಿದೆ. ಮೆಜೆಸ್ಟಿಕ್‌ನಿಂದ ನಾಲ್ಕು ದಿಕ್ಕುಗಳಿಗೆ ರಾತ್ರಿ 1:30ಕ್ಕೆ ಕೊನೆಯ ರೈಲು ಹೊರಡಲಿದೆ.

ಸ್ಟೇಡಿಯಂಗೆ ಹತ್ತಿರವಿರುವ ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣಗಳನ್ನು ಬಳಸಲು ಅಭಿಮಾನಿಗಳಿಗೆ ಸೂಚಿಸಲಾಗಿದೆ. ಅಲ್ಲದೆ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನಗಳಿಗೆ 30 ರೂ ಹಾಗೂ ಕಾರುಗಳಿಗೆ 60 ರೂ ಪಾರ್ಕಿಂಗ್ ಶುಲ್ಕ ನಿಗದಿಪಡಿಸಲಾಗಿದೆ.

ಟ್ರಾಫಿಕ್ ಸಮಸ್ಯೆ ತಪ್ಪಿಸಲು ಮೆಟ್ರೋ ಬಳಕೆ ಮಾಡಲು ಬಿಎಂಆರ್‌ಸಿಎಲ್ ಮನವಿ ಮಾಡಿದೆ. ಜೊತೆಗೆ ಕ್ರಿಕೆಟ್ ಅಭಿಮಾನಿಗಳ ಅನುಕೂಲಕ್ಕಾಗಿ ಬಿಎಂಟಿಸಿ ವಿಶೇಷ ಬಸ್ ಸೇವೆಗಳನ್ನೂ ವಿಸ್ತರಿಸಿದೆ.

ಸರ್ಜಾಪುರ, ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ, ಯಲಹಂಕ, ಹೊಸಕೋಟೆ ಹಾಗೂ ಬನಶಂಕರಿ ಸೇರಿದಂತೆ ಹಲವು ಮಾರ್ಗಗಳಲ್ಲಿ ವಿಶೇಷ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!