ತುಮಕೂರು: ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಹೃದಯಾಘಾತದಿಂದ ನ್ಯಾಯಾಧೀಶೆ ಸಾವನ್ನಪ್ಪಿದ ದುಃಖದ ಘಟನೆ ನಡೆದಿದೆ.
ಕಾಂತಮ್ಮ (43) ಮೃತ ನ್ಯಾಯಾಧೀಶೆ. ಅವರು ಮಧುಗಿರಿ ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ವಾಸವಿದ್ದು, ಅಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಅಂಚೆದೊಡ್ಡಿ ಗ್ರಾಮದವರಾದ ಕಾಂತಮ್ಮ, ಕಳೆದ ಒಂದು ವರ್ಷದಿಂದ ಮಧುಗಿರಿಯ ಜೆಎಂಎಫ್ಸಿ ನ್ಯಾಯಾಲಯದಲ್ಲಿ ನ್ಯಾಯಾಧೀಶೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಘಟನೆ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



