HomeBengaluru Newsಡಿಜಿ-ಐಜಿಪಿ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ: 2027ರವರೆಗೆ ಅಧಿಕಾರ ಮುಂದುವರಿಕೆ!

ಡಿಜಿ-ಐಜಿಪಿ ಎಂ.ಎ.ಸಲೀಂ ಸೇವಾವಧಿ ವಿಸ್ತರಣೆ: 2027ರವರೆಗೆ ಅಧಿಕಾರ ಮುಂದುವರಿಕೆ!

For Dai;y Updates Join Our whatsapp Group

Spread the love

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ವ್ಯವಸ್ಥೆಯಲ್ಲಿ ಮಹತ್ವದ ಆಡಳಿತಾತ್ಮಕ ನಿರ್ಧಾರವಾಗಿ, ರಾಜ್ಯ ಪೊಲೀಸ್ ಮುಖ್ಯಸ್ಥ ಡಿಜಿ-ಐಜಿಪಿ ಡಾ. ಎಂ.ಎ.ಸಲೀಂ ಅವರ ಸೇವಾವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಹೊಸ ಆದೇಶದಂತೆ, ಅವರ ಅಧಿಕಾರಾವಧಿ 2027ರ ಅಕ್ಟೋಬರ್ 29ರವರೆಗೆ ಮುಂದುವರಿಯಲಿದೆ.

1993ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಡಾ. ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ಡಿಜಿ-ಐಜಿಪಿಯಾಗಿ ನೇಮಕಗೊಂಡಿದ್ದರು. ಬಳಿಕ 2025ರ ಆಗಸ್ಟ್‌ನಲ್ಲಿ ಪೂರ್ಣಾವಧಿಗೆ ನೇಮಕಗೊಂಡ ಅವರು, ಮೂಲತಃ ಈ ವರ್ಷದ ಜೂನ್‌ನಲ್ಲಿ ನಿವೃತ್ತಿಯಾಗಬೇಕಿತ್ತು. ಆದರೆ, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಅನ್ವಯ ಸೇವಾವಧಿಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

2006ರ ಸೆಪ್ಟೆಂಬರ್ 22ರಂದು ಹೊರಬಂದ ಸುಪ್ರೀಂಕೋರ್ಟ್ ತೀರ್ಪಿನ ಪ್ರಕಾರ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಕನಿಷ್ಠ ಎರಡು ವರ್ಷಗಳ ಅಧಿಕಾರಾವಧಿ ನೀಡುವುದು ಕಡ್ಡಾಯ. ಪ್ರಕಾಶ್ ಸಿಂಗ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ, ಡಾ. ಎಂ.ಎ.ಸಲೀಂ ಅವರ ಅವಧಿಯನ್ನು ಎರಡು ವರ್ಷಗಳವರೆಗೆ ವಿಸ್ತರಿಸಲಾಗಿದೆ.

ಸೇವಾ ಅವಧಿಯಲ್ಲಿ ಡಾ. ಎಂ.ಎ.ಸಲೀಂ ಅವರು ಹಲವು ಪ್ರಮುಖ ಹುದ್ದೆಗಳನ್ನು ವಹಿಸಿಕೊಂಡಿದ್ದು, ಕಲಬುರಗಿ ಹಾಗೂ ಕುಶಾಲನಗರದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಡಿಜಿಪಿಯಾಗಿ ಅಧಿಕಾರ ಸ್ವೀಕರಿಸುವ ಮೊದಲು ಸಿಐಡಿ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಸಂಚಾರ ಸುಧಾರಣೆಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಜಾರಿಗೆ ತಂದು ಜನಪ್ರಿಯತೆ ಗಳಿಸಿದ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!