ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ವಿಷು ಜಾತ್ರೆ ಪ್ರಯುಕ್ತ ನಡೆಯುವ ವಿಶೇಷ ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ, ಇಂದಿನಿಂದ ಏಪ್ರಿಲ್ 22ರವರೆಗೆ ದರ್ಶನ ವೇಳೆಯಲ್ಲಿ ಬದಲಾವಣೆ ಜಾರಿಗೆ ತಂದಿರುವುದಾಗಿ ಆಡಳಿತ ಮಂಡಳಿ ತಿಳಿಸಿದೆ.
ಹೊಸ ವೇಳಾಪಟ್ಟಿಯ ಪ್ರಕಾರ, ಬೆಳಗ್ಗೆ 8:30 ನಂತರ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ರಾತ್ರಿ 8 ಗಂಟೆಯ ಬಳಿಕ ದೇವಸ್ಥಾನದ ಹೊರಾಂಗಣದಿಂದ ಮಾತ್ರ ದರ್ಶನ ವ್ಯವಸ್ಥೆ ಇರಲಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳು ಸಹಕರಿಸುವಂತೆ ಆಡಳಿತ ಮಂಡಳಿ ಮನವಿ ಮಾಡಿದೆ.



