HomeLife StyleIPL 2026: ನಾಳೆ RCB ಮ್ಯಾಚ್; ಬದಲಾದ ಸಮಯದಲ್ಲಿ ಡೆಲ್ಲಿ ವಿರುದ್ದ ಫೈಟ್ ಮಾಡಲಿದೆ ಬೆಂಗಳೂರು!

IPL 2026: ನಾಳೆ RCB ಮ್ಯಾಚ್; ಬದಲಾದ ಸಮಯದಲ್ಲಿ ಡೆಲ್ಲಿ ವಿರುದ್ದ ಫೈಟ್ ಮಾಡಲಿದೆ ಬೆಂಗಳೂರು!

For Dai;y Updates Join Our whatsapp Group

Spread the love

ಐಪಿಎಲ್ 2026ರಲ್ಲಿ ಏಪ್ರಿಲ್ 18ರಂದು ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, ದಿನದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿದೆ.

ಈ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ಐದು ಪಂದ್ಯಗಳಲ್ಲಿ ನಾಲ್ಕರಲ್ಲಿ ಗೆಲುವು ಸಾಧಿಸಿ ಉತ್ತಮ ಫಾರ್ಮ್‌ನಲ್ಲಿ ಇದೆ. ಇನ್ನೊಂದೆಡೆ, ಆರಂಭದಲ್ಲಿ ಗೆಲುವಿನ ಸರಣಿಯಲ್ಲಿ ಇದ್ದ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಕೊನೆಯ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಮತ್ತೆ ಗೆಲುವಿನ ಹಾದಿಗೆ ಮರಳಲು ಪ್ರಯತ್ನಿಸುತ್ತಿದೆ.

ಪಂದ್ಯದ ವಿವರ:

ಆರ್‌ಸಿಬಿ ಮತ್ತು ಡೆಲ್ಲಿ ನಡುವಿನ 26ನೇ ಪಂದ್ಯ ಏಪ್ರಿಲ್ 18ರ ಶನಿವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದೆಲ್ಲಿ ನಡೆಯಲಿದೆ. ಮಧ್ಯಾಹ್ನ 3:30ಕ್ಕೆ ಪಂದ್ಯ ಪ್ರಾರಂಭವಾಗಲಿದ್ದು, 3 ಗಂಟೆಗೆ ಟಾಸ್ ನಡೆಯಲಿದೆ.

ಎಲ್ಲಿ ವೀಕ್ಷಿಸಬಹುದು?

ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ವೀಕ್ಷಿಸಬಹುದು. ಮೊಬೈಲ್‌ನಲ್ಲಿ ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮೂಲಕ ಲೈವ್ ವೀಕ್ಷಣೆ ಸಾಧ್ಯ.

ಉಭಯ ತಂಡಗಳ ಆಟಗಾರರ ಪಟ್ಟಿ:

ಆರ್‌ಸಿಬಿ ತಂಡ:
ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ.

ಡೆಲ್ಲಿ ಕ್ಯಾಪಿಟಲ್ಸ್ ತಂಡ:
ಪಾತುಮ್ ನಿಸ್ಸಾಂಕ, ಕೆಎಲ್ ರಾಹುಲ್, ಸಮೀರ್ ರಿಜ್ವಿ, ಡೇವಿಡ್ ಮಿಲ್ಲರ್, ಅಕ್ಸರ್ ಪಟೇಲ್, ಟ್ರಿಸ್ಟಾನ್ ಸ್ಟಬ್ಸ್, ಅಕಿಬ್ ನಬಿ ದಾರ್, ಲುಂಗಿ ಎನ್‌ಗಿಡಿ, ಕುಲ್ದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್, ವಿಪ್ರಜ್ ನಿಗಮ್, ಅಶುತೋಷ್ ಶರ್ಮಾ, ಕರುಣ್ ನಾಯರ್, ಅಜಯ್ ಮಂಡಲ್, ಪೃಥ್ವಿ ಶಾ, ತ್ರಿಪುರ ವಿಜಯ್, ಅಭಿಷೇಕ್ ಪೊರೆಲ್, ಸಾಹಿಲ್ ಪರಾಖ್, ಮಾಧವ್ ತಿವಾರಿ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!