HomeBengaluru Newsಹೆಸರಘಟ್ಟದಲ್ಲಿ ಹಕ್ಕಿಜ್ವರ ಪತ್ತೆ: ಸರ್ಕಾರದ ಕಟ್ಟುನಿಟ್ಟಿನ ಕ್ರಮ – ಜನರಿಗೆ ಆತಂಕ ಬೇಡ!

ಹೆಸರಘಟ್ಟದಲ್ಲಿ ಹಕ್ಕಿಜ್ವರ ಪತ್ತೆ: ಸರ್ಕಾರದ ಕಟ್ಟುನಿಟ್ಟಿನ ಕ್ರಮ – ಜನರಿಗೆ ಆತಂಕ ಬೇಡ!

For Dai;y Updates Join Our whatsapp Group

Spread the love

ಬೆಂಗಳೂರು: ಹೆಸರಘಟ್ಟದ ಮತ್ಕೂರು ಗ್ರಾಮದಲ್ಲಿ ಹಕ್ಕಿಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತುರ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು, ಸಾರ್ವಜನಿಕರು ಆತಂಕಪಡಬೇಕಾದ ಅಗತ್ಯವಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು,, ಭೋಪಾಲ್‌ನ ರಾಷ್ಟ್ರೀಯ ಪ್ರಾಣಿ ರೋಗ ಸಂಶೋಧನಾ ಸಂಸ್ಥೆಯ ವರದಿ ಆಧರಿಸಿ ಏಪ್ರಿಲ್ 14ರಂದು ಮತ್ಕೂರು ಕೇಂದ್ರದಲ್ಲಿ ಹಕ್ಕಿಜ್ವರ ದೃಢಪಟ್ಟಿದೆ. ತಕ್ಷಣವೇ ಆರೋಗ್ಯ ಇಲಾಖೆಯ ತ್ವರಿತ ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ವೈರಸ್ ಹಕ್ಕಿಗಳಲ್ಲಿ ಮಾತ್ರ ಪತ್ತೆಯಾಗಿದೆ. ಮನುಷ್ಯರಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ. 10 ಕಿ.ಮೀ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ. ಅಗತ್ಯವಿದ್ದರೆ ತಕ್ಷಣ ಪರೀಕ್ಷೆ ಪ್ರಾರಂಭಿಸಲಾಗುವುದು” ಎಂದು ತಿಳಿಸಿದ್ದಾರೆ.

ನಿಷೇಧ ಮತ್ತು ಕಣ್ಗಾವಲು ವಲಯ ಘೋಷಣೆ:

ಸೋಂಕು ಕಂಡುಬಂದ ಪ್ರದೇಶದ ಸುತ್ತ 3 ಕಿಲೋಮೀಟರ್ ವ್ಯಾಪ್ತಿಯನ್ನು ಸೋಂಕಿತ ವಲಯವಾಗಿ ಮತ್ತು 10 ಕಿಲೋಮೀಟರ್ ವ್ಯಾಪ್ತಿಯನ್ನು ಕಣ್ಗಾವಲು ವಲಯವಾಗಿ ಘೋಷಿಸಲಾಗಿದೆ. ಈ ಪ್ರದೇಶವನ್ನು ಒಂದು ವರ್ಷದವರೆಗೆ ನಿಷೇಧಿತ ಪ್ರದೇಶವೆಂದು ಗುರುತಿಸಲಾಗಿದೆ.

ಕೋಳಿಗಳ ನಾಶ, ಸಿಬ್ಬಂದಿ ಕ್ವಾರಂಟೈನ್:

ಪಶುಪಾಲನಾ ಇಲಾಖೆಯ ನೇತೃತ್ವದಲ್ಲಿ 7,444 ಕೋಳಿಗಳು, 14 ಸಾವಿರಕ್ಕೂ ಹೆಚ್ಚು ಮೊಟ್ಟೆಗಳು ಹಾಗೂ 2,250 ಕೆಜಿ ಆಹಾರವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದೆ. ಕಾರ್ಯಾಚರಣೆಯಲ್ಲಿ ಭಾಗಿಯಾದ 10 ಸಿಬ್ಬಂದಿಯನ್ನು ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಅವರಿಗೆ ಒಸೆಲ್ಟಾಮಿವಿರ್ ಔಷಧ ನೀಡಲಾಗಿದೆ.

ಜನರ ಮೇಲೆ ಕಟ್ಟುನಿಟ್ಟಿನ ನಿಗಾ:

ಸೋಂಕಿತ ವಲಯದ 2 ಗ್ರಾಮಗಳ 3,422 ಜನರು ಹಾಗೂ ಕಣ್ಗಾವಲು ವಲಯದ 17 ಗ್ರಾಮಗಳ 22,395 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಆಶಾ ಕಾರ್ಯಕರ್ತೆಯರು ಮುಂದಿನ 10 ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಜ್ವರ ತಪಾಸಣೆ ನಡೆಸಲಿದ್ದಾರೆ.

ಸಾರ್ವಜನಿಕರಿಗೆ ಸೂಚನೆಗಳು:

ಈವರೆಗೆ ಮನುಷ್ಯರಲ್ಲಿ ಸೋಂಕು ಕಂಡುಬಂದಿಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ:

  • ಸತ್ತ ಅಥವಾ ಅಸ್ವಸ್ಥ ಹಕ್ಕಿಗಳ ಸಂಪರ್ಕ ತಪ್ಪಿಸಬೇಕು
  • ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ಸೇವಿಸಬೇಕು
  • ಅನುಮಾನಾಸ್ಪದ ಲಕ್ಷಣ ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು

ಒಟ್ಟಾರೆ, ಸರ್ಕಾರ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದು, ಜನರು ಸಹ ಜಾಗರೂಕರಾಗಿರಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.

 

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!