HomeKarnataka Newsಚಿಕ್ಕಮಗಳೂರು ಬನ್ನೂರಿನಲ್ಲಿ ದಾರುಣ ಘಟನೆ: ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ!

ಚಿಕ್ಕಮಗಳೂರು ಬನ್ನೂರಿನಲ್ಲಿ ದಾರುಣ ಘಟನೆ: ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಶವ ಪತ್ತೆ!

For Dai;y Updates Join Our whatsapp Group

ಚಿಕ್ಕಮಗಳೂರು: ತಾಲೂಕಿನ ಬನ್ನೂರು ಗ್ರಾಮದ ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹಗಳು ಪತ್ತೆಯಾಗಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ರಮೇಶ್ (27) ಹಾಗೂ ಮಹೇಶ್ (34) ಎಂದು ಗುರುತಿಸಲಾಗಿದೆ.

ಮೃತರು ಕೊಪ್ಪ ತಾಲೂಕಿನ ಜಯಪುರ ಗ್ರಾಮದವರಾಗಿದ್ದು, ಬನ್ನೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕೃಷಿಹೊಂಡದ ಬಳಿ ಅವರ ಚಪ್ಪಲಿ ಪತ್ತೆಯಾಗಿದ್ದರಿಂದ ಅವರು ನೀರಿನಲ್ಲಿ ಮುಳುಗಿರಬಹುದೆಂಬ ಶಂಕೆ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕೃಷಿಹೊಂಡದಲ್ಲಿ ಶೋಧ ಕಾರ್ಯ ನಡೆಸಿದರು. ಬಳಿಕ ಇಬ್ಬರ ಮೃತದೇಹಗಳನ್ನು ನೀರಿನಿಂದ ಹೊರತೆಗೆದು ಪತ್ತೆಹಚ್ಚಲಾಗಿದೆ.

ಈ ಘಟನೆ ಅಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img