ಬೆಂಗಳೂರು: ನಗರದ ದೊಡ್ಡಗುಬ್ಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಂಪುರ ಬಳಿ ಭಾರೀ ಅಗ್ನಿ ದುರಂತ ಸಂಭವಿಸಿದೆ.
ಅನುಪಯುಕ್ತ ವಸ್ತುಗಳ (ಗುಜರಿ) ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಭಾರಿ ಪ್ರಮಾಣದಲ್ಲಿ ವ್ಯಾಪಿಸಿದೆ.
ಬೆಂಕಿಯ ತೀವ್ರತೆಯಿಂದ ಸುಮಾರು 10 ಕಿಲೋಮೀಟರ್ ವ್ಯಾಪ್ತಿವರೆಗೆ ದಟ್ಟ ಹೊಗೆ ಆವರಿಸಿರುವುದು ಕಂಡುಬಂದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ. ಬೆಂಕಿಯ ವ್ಯಾಪ್ತಿ ದೊಡ್ಡದಾಗಿರುವುದರಿಂದ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.



