ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿ ಗಮನ ಸೆಳೆದಿದ್ದಾರೆ.
ಏಪ್ರಿಲ್ 29ರಂದು ನಡೆಯಲಿರುವ ಎರಡನೇ ಹಂತದ ಮತದಾನಕ್ಕೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆ, ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ದೋಣಿ ವಿಹಾರದ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇಂದು ಬೆಳಿಗ್ಗೆ ಕೋಲ್ಕತ್ತಾದ ಗಂಗಾ ನದಿಯ ಉಪನದಿಯಾದ ಹೂಗ್ಲಿ ನದಿಯಲ್ಲಿ ಕೈಯಲ್ಲಿ ಕ್ಯಾಮೆರಾ ಹಿಡಿದು ದೋಣಿ ಸವಾರಿ ಆನಂದಿಸುತ್ತಿರುವ ದೃಶ್ಯಗಳು ಕಂಡುಬಂದಿವೆ.
For every Bengali, the Ganga occupies a very special place. One can say that the Ganga flows through the soul of Bengal. Her divine waters carry the timeless spirit of an entire civilisation.
This morning in Kolkata, I spent some time on the banks of the Hooghly river, an… pic.twitter.com/I3Y0gsFl3E
— Narendra Modi (@narendramodi) April 24, 2026
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮೋದಿ, ಪ್ರತಿಯೊಬ್ಬ ಬಂಗಾಳಿಗನಿಗೂ ಗಂಗಾ ನದಿ ವಿಶೇಷ ಮತ್ತು ಪವಿತ್ರ ಸ್ಥಾನ ಹೊಂದಿದೆ ಎಂದು ಹೇಳಿದ್ದಾರೆ. ಗಂಗಾ ಕೇವಲ ನದಿ ಮಾತ್ರವಲ್ಲ, ಅದು ಇಲ್ಲಿನ ಸಂಸ್ಕೃತಿ, ಇತಿಹಾಸ ಮತ್ತು ಜೀವನಶೈಲಿಯ ಪ್ರತಿಬಿಂಬವಾಗಿದ್ದು, ಬಂಗಾಳದ ಆತ್ಮದಂತೆ ಹರಿಯುತ್ತದೆ ಎಂದು ಅವರು ವಿವರಿಸಿದ್ದಾರೆ.
ಹೂಗ್ಲಿ ನದಿಯ ದಡದಲ್ಲಿ ಕೆಲ ಸಮಯ ಕಳೆದಿದ್ದು, ಗಂಗಾ ಮಾತೆಗೆ ಕೃತಜ್ಞತೆ ಸಲ್ಲಿಸಿದ್ದಾಗಿ ಮೋದಿ ತಿಳಿಸಿದ್ದಾರೆ. ಇದೇ ವೇಳೆ ವಿದ್ಯಾಸಾಗರ್ ಸೇತು ಹಾಗೂ ಹೌರಾ ಸೇತುವೆಯನ್ನು ಕಣ್ತುಂಬಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬಂಗಾಳಿಗರ ಸಮೃದ್ಧಿಗಾಗಿ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿರುವುದಾಗಿ ಮೋದಿ ಹೇಳಿದ್ದಾರೆ.



