HomePolitics Newsಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ? ಸಿಎಂ ಆಪ್ತರೊಂದಿಗೆ ಗುಪ್ತ ಸಭೆ, ಸಿದ್ದರಾಮಯ್ಯಗೆ ಒತ್ತಡ

ಕಾಂಗ್ರೆಸ್‌ನಲ್ಲಿ ಆಂತರಿಕ ಕಲಹ? ಸಿಎಂ ಆಪ್ತರೊಂದಿಗೆ ಗುಪ್ತ ಸಭೆ, ಸಿದ್ದರಾಮಯ್ಯಗೆ ಒತ್ತಡ

For Dai;y Updates Join Our whatsapp Group

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆಗಳು ಕಾಣಿಸುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರೇ ಟಾರ್ಗೆಟ್ ಆಗುತ್ತಿರುವ ಆರೋಪಗಳು ಕೇಳಿಬರುತ್ತಿವೆ. ಈ ನಡುವೆ ಸಿಎಂ ಹಾಗೂ ಅವರ ಆಪ್ತ ಸಚಿವರು ಬೆಂಗಳೂರಿನ ಕನ್ನಿಂಗ್‌ಹ್ಯಾಮ್ ರಸ್ತೆಯ ಖಾಸಗಿ ಕಟ್ಟಡದಲ್ಲಿ ನಡೆಸಿದ ಗುಪ್ತ ಸಭೆ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ.

ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರಾದ ಭೈರತಿ ಸುರೇಶ್, ಡಾ.ಜಿ.ಪರಮೇಶ್ವರ್, ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಮತ್ತು ದಿನೇಶ್ ಗುಂಡೂರಾವ್ ಭಾಗವಹಿಸಿದ್ದರು. ಸಿಎಂ ಆಪ್ತರ ವಿರುದ್ಧ ನಡೆಯುತ್ತಿರುವ ಬೆಳವಣಿಗೆಗಳ ನಡುವೆಯೂ ಸಿದ್ದರಾಮಯ್ಯ ಮೌನವಾಗಿರುವ ವಿಚಾರದ ಬಗ್ಗೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿರುವುದು ತಿಳಿದುಬಂದಿದೆ.

ಈ ಪರಿಸ್ಥಿತಿ ಮುಂದುವರಿದರೆ ಪಕ್ಷದ ಹಿರಿಯ ನಾಯಕರ ಅಸ್ತಿತ್ವಕ್ಕೂ ಧಕ್ಕೆಯಾಗಬಹುದು ಎಂಬ ಆತಂಕ ಸಭೆಯಲ್ಲಿ ವ್ಯಕ್ತವಾಗಿದೆ. ಪಕ್ಷದೊಳಗೆ ಕೆಲವರು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿರುವುದು ಸರಿಯಲ್ಲ ಎಂಬ ಅಭಿಪ್ರಾಯವೂ ಕೇಳಿಬಂದಿದೆ.

ಇಂತಹ ಕ್ರಮಗಳು ಮುಂದಿನ 2028ರ ಚುನಾವಣೆಯ ಸಂದರ್ಭದಲ್ಲಿ ಪಕ್ಷದ ಮೇಲೆ ಪರಿಣಾಮ ಬೀರಿ, ಕೆಲವು ಸಮುದಾಯಗಳು ದೂರ ಸರಿಯುವ ಸಾಧ್ಯತೆಯೂ ಇದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ. ಹಿರಿಯ ನಾಯಕರ ಅನುಭವವನ್ನು ಕಡೆಗಣಿಸುವ ರೀತಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪಕ್ಷಕ್ಕೆ ಹಾನಿ ಉಂಟುಮಾಡುತ್ತಿವೆ ಎಂದು ಸೂಚಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಮೌನದಿಂದ ಕಾಂಗ್ರೆಸ್‌ಗೆ ನಷ್ಟವಾಗುತ್ತಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದು, ಅವರು ತಕ್ಷಣ ಮಧ್ಯಪ್ರವೇಶ ಮಾಡಬೇಕೆಂದು ಸಭೆಯಲ್ಲಿ ಒತ್ತಡ ಹೇರಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img