HomeKarnataka Newsತುಮಕೂರಿನಲ್ಲಿ 35 ನವಿಲುಗಳ ಸಾವು: ಬಿಸಿಲಿನ ಪರಿಣಾಮವೋ ಅಥವಾ ಹಕ್ಕಿ ಜ್ವರವೋ?

ತುಮಕೂರಿನಲ್ಲಿ 35 ನವಿಲುಗಳ ಸಾವು: ಬಿಸಿಲಿನ ಪರಿಣಾಮವೋ ಅಥವಾ ಹಕ್ಕಿ ಜ್ವರವೋ?

For Dai;y Updates Join Our whatsapp Group

Spread the love

ತುಮಕೂರು: ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ಬರೋಬ್ಬರಿ 35 ನವಿಲುಗಳು ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ಏರಿಕೆಯಿಂದ ಈ ಸಾವುಗಳು ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಜೊತೆಗೆ ಹಕ್ಕಿ ಜ್ವರದ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ನಗರ ಹೊರವಲಯದ ಬೊಮ್ಮನಹಳ್ಳಿ ಮತ್ತು ಮಾಚೇನಹಳ್ಳಿ ಸುತ್ತಮುತ್ತ ಸುಮಾರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿವೆ. ಘಟನೆ ತಿಳಿದು ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ.

ಮೃತ ನವಿಲುಗಳ ಶವಪರೀಕ್ಷೆ ನಡೆಸಿ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಗಳು ಮುಂದಿನ 48 ಗಂಟೆಗಳಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನವಿಲುಗಳ ಶ್ವಾಸಕೋಶದ ಮೇಲೆ ತೀವ್ರ ಪರಿಣಾಮ ಕಂಡುಬಂದಿದ್ದು, ಅತಿಯಾದ ಬಿಸಿಲು ಮತ್ತು ನಿರ್ಜಲೀಕರಣವೇ ಸಾವಿಗೆ ಪ್ರಮುಖ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಆದಾಗ್ಯೂ, ಹಕ್ಕಿ ಜ್ವರ ಸೋಂಕಿನ ಸಾಧ್ಯತೆಯನ್ನೂ ತಳ್ಳಿಹಾಕಲಾಗುವುದಿಲ್ಲ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!