ಬೆಂಗಳೂರು: ಬಿಎಸ್‌ಎನ್‌ಎಲ್ ಮಾಡ್ಯೂಲ್‌ಗಳು ಮತ್ತು ಕಾಪರ್ ವೈರ್‌ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ವೊಂದನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ.
ಉತ್ತರಪ್ರದೇಶ ಮೂಲದ ರವಿ ಚೌಹಾಣ್, ಸಂದೀಪ್ ಹಾಗೂ ಸೈಯದ್ ಜಾಹೇದ್ ಬಂಧಿತ ಆರೋಪಿಗಳು. ಇವರು ಬಿಎಸ್‌ಎನ್‌ಎಲ್ ಸಿಬ್ಬಂದಿಯಂತೆ ನೀಲಿ ಸಮವಸ್ತ್ರ ಧರಿಸಿ, ರಿಪೇರಿ ಕೆಲಸದ ನೆಪದಲ್ಲಿ ಕಳ್ಳತನ ನಡೆಸುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು ಫುಟ್‌ಪಾತ್‌ಗಳಲ್ಲಿ ಅಳವಡಿಸಿದ್ದ ಟೆಲಿಫೋನ್ ಹಾಗೂ ಇಂಟರ್ನೆಟ್ LAN ಕೇಬಲ್‌ಗಳನ್ನು ಹೊಂದಿದ್ದ ಕಬ್ಬಿಣದ ಪಿಲ್ಲರ್‌ಗಳನ್ನು ಪಿಕಾಸಿ, ಸುತ್ತಿಗೆ, ಸ್ಕ್ರೂಡ್ರೈವರ್ ಮತ್ತು ಕಟ್ಟರ್ ಬಳಸಿ ಒಡೆದು ತಂತಿಗಳನ್ನು ಕದ್ದೊಯ್ಯುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ವಿಶೇಷವೆಂದರೆ, ಕಳ್ಳತನಕ್ಕಾಗಿ ವಿಮಾನದ ಮೂಲಕ ಬೆಂಗಳೂರಿಗೆ ಬಂದು ಕೃತ್ಯ ನಡೆಸಿ, ನಂತರ ಕದ್ದ ವಸ್ತುಗಳೊಂದಿಗೆ ರೈಲಿನಲ್ಲಿ ಬೇರೆ ರಾಜ್ಯಗಳಿಗೆ ಪರಾರಿಯಾಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ದಿನಕ್ಕೊಂದು ರಾಜ್ಯದಲ್ಲಿ ಕಳ್ಳತನ ಮಾಡಿ ತಪ್ಪಿಸಿಕೊಳ್ಳುತ್ತಿದ್ದ ಈ ಗ್ಯಾಂಗ್‌ನ್ನು ಯಶವಂತಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಬಂಧಿಸಿದ್ದಾರೆ. ಮುಂದಿನ ತನಿಖೆ ಮುಂದುವರಿದಿದೆ.



