ಮಡಿಕೇರಿ: ಕೊಡಗು ಜಿಲ್ಲೆಯ ಚೇರಂಬಾಣೆ ಗ್ರಾಮದಲ್ಲಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ದಾರುಣ ಘಟನೆಗೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗಳಿಗೆ ವಿದಾಯ ಹೇಳಿದ ಕೆಲವೇ ಹೊತ್ತಿನಲ್ಲಿ ಈ ದುರ್ಘಟನೆ ನಡೆದಿರುವುದು ಇನ್ನಷ್ಟು ನೋವುಂಟು ಮಾಡಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ರೋಹಿಣಿ (51) ಅವರು ಜೀವನದ ಬೇಸರದಿಂದ ಮನೆಯಲ್ಲಿ ಇದ್ದ ಗನ್ ಮೂಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಈ ಘಟನೆ ಸ್ಥಳೀಯರಲ್ಲಿ ಮತ್ತು ಶಿಕ್ಷಣ ವಲಯದಲ್ಲಿ ತೀವ್ರ ಆಘಾತ ಉಂಟುಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಪ್ರೀತಿಯ ಶಿಕ್ಷಕಿಯನ್ನು ಕಳೆದುಕೊಂಡ ನೋವಿನಲ್ಲಿ ಮುಳುಗಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣಗಳ ಕುರಿತು ಪೊಲೀಸರು ಸವಿಸ್ತಾರ ತನಿಖೆ ಕೈಗೊಂಡಿದ್ದಾರೆ.



