ಐಪಿಎಲ್ 2026ರ 37ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು MA ಚಿದಂಬರಂ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಭರ್ಜರಿ ಜಯ ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿತು. ಪವರ್‌ಪ್ಲೇನಲ್ಲಿ ಕೇವಲ 28 ರನ್ ಗಳಿಸಿದ CSK ಮೂರು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಒತ್ತಡಕ್ಕೆ ಒಳಗಾಯಿತು. ನಾಯಕ ರುತುರಾಜ್ ಗಾಯಕ್ವಾಡ್ ಹಾಗೂ ಶಿವಂ ದುಬೆ ನಡುವೆ 59 ರನ್‌ಗಳ ಜೊತೆಯಾಟ ನಡೆದರೂ, ಇತರೆ ಬ್ಯಾಟರ್‌ಗಳಿಂದ ದೊಡ್ಡ ಕೊಡುಗೆ ಬರಲಿಲ್ಲ. ಅಂತಿಮವಾಗಿ CSK 20 ಓವರ್‌ಗಳಲ್ಲಿ 158 ರನ್‌ಗಳಿಗೆ ಸೀಮಿತವಾಯಿತು. ಗಾಯಕ್ವಾಡ್ ಅಜೇಯ 74 ರನ್ ಗಳಿಸಿ ತಂಡದ ಪರ ಟಾಪ್ ಸ್ಕೋರರ್ ಆಗಿದ್ದರು.
ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ಉತ್ತಮ ಆರಂಭ ಕಂಡಿತು. ಶುಭಮನ್ ಗಿಲ್ ಮತ್ತು ಸಾಯಿ ಸುದರ್ಶನ್ ಮೊದಲ ವಿಕೆಟ್‌ಗೆ 58 ರನ್‌ಗಳ ಜೊತೆಯಾಟ ನೀಡಿದರು. ಗಿಲ್ 33 ರನ್ ಗಳಿಸಿ ಔಟಾದ ಬಳಿಕ ಸಾಯಿ ಸುದರ್ಶನ್ ಹಾಗೂ ಜೋಸ್ ಬಟ್ಲರ್ ಆಟವನ್ನು ನಿಯಂತ್ರಿಸಿದರು. ಸುದರ್ಶನ್ 46 ಎಸೆತಗಳಲ್ಲಿ 87 ರನ್‌ಗಳ ಭರ್ಜರಿ ಇನ್ನಿಂಗ್ಸ್ ಆಡಿದರೆ, ಬಟ್ಲರ್ ಅಜೇಯ 39 ರನ್ ಗಳಿಸಿದರು.
ಅಂತಿಮವಾಗಿ ಗುಜರಾತ್ ಟೈಟಾನ್ಸ್ ಕೇವಲ 2 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಈ ಜಯದೊಂದಿಗೆ ಗುಜರಾತ್ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನಕ್ಕೇರಿದರೆ, ಚೆನ್ನೈ ಸೂಪರ್ ಕಿಂಗ್ಸ್ 6ನೇ ಸ್ಥಾನಕ್ಕೆ ಕುಸಿದಿದೆ.



