HomeKarnataka Newsರಾಜ್ಯದಲ್ಲಿ ಮಳೆ–ಗಾಳಿ ಅಬ್ಬರ: ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಣೆ!

ರಾಜ್ಯದಲ್ಲಿ ಮಳೆ–ಗಾಳಿ ಅಬ್ಬರ: ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಣೆ!

ಬೆಂಗಳೂರು: ಉಷ್ಣ ಅಲೆಯಿಂದ ಬೇಸತ್ತಿದ್ದ ಕರಾವಳಿ ಭಾಗಗಳಲ್ಲಿ ಇಂದು ಗುಡುಗು–ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇದರ ಜೊತೆಗೆ ಉತ್ತರ ಕರ್ನಾಟಕದ ಆರು ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ತೀವ್ರ ಬಿಸಿಲು ಕಾಣಿಸಿಕೊಂಡಿತ್ತು. ಇಂದು ಈ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದ ಗಾಳಿ ಸಹಿತ ಆಲಿಕಲ್ಲು ಮಳೆ ಸುರಿಯುವ ಸಾಧ್ಯತೆ ಇದೆ. ಮುಂದಿನ 2-3 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಮಳೆಯಾಗಲಿದೆ.

ಇತ್ತ, ಈಗಾಗಲೇ ಮಳೆ–ಗಾಳಿಯಿಂದ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಭದ್ರಾವತಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆಗೆ 200ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಹಾಗೂ ಮರಗಳು ಧರೆಗುರುಳಿವೆ. ಮನೆಗಳ ಮೇಲ್ಚಾವಣಿಗಳು ಹಾನಿಗೊಂಡಿದ್ದು, ಅಡಕೆ ತೋಟಗಳು ನಾಶವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ.

ತರಿಕೆರೆನಲ್ಲಿ ಮನೆಗಳ ಮೇಲೆ ಮರಗಳು ಬಿದ್ದು ಹಾನಿಯಾಗಿದ್ದು, ರಾಯಚೂರಿನಲ್ಲಿ ಹೆದ್ದಾರಿಗಳ ಮೇಲೆ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.

ಬಿಸಿಲು ಮತ್ತು ಮಳೆಯ ದ್ವಿಮುಖ ಪರಿಣಾಮಕ್ಕೆ ಜನಸಾಮಾನ್ಯರು ಕಂಗೆಟ್ಟಿದ್ದು, ಸಂತ್ರಸ್ತರು ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img