HomeUncategorizedರಾಜ್ಯದಲ್ಲಿ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ!

ರಾಜ್ಯದಲ್ಲಿ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ಸರ್ಕಾರ ಆದೇಶ!

Spread the love

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಪರಿಶಿಷ್ಟ ಜಾತಿಗಳ ಒಟ್ಟು ಮೀಸಲಾತಿಯನ್ನು ಶೇ.17ರಿಂದ ಶೇ.15ಕ್ಕೆ ಮರುಹಂಚಿಕೆ ಮಾಡಿ ಒಳಮೀಸಲಾತಿ ವ್ಯವಸ್ಥೆ ಜಾರಿಗೆ ತರಲಾಗಿದೆ.

ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಎಸ್‌ಸಿ ಸಮುದಾಯದ 101 ಉಪಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಮಾಡಿತ್ತು. ಇದರ ಬೆನ್ನಲ್ಲೇ 56,432 ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ತಕ್ಷಣ ಕ್ರಮ ಕೈಗೊಳ್ಳಲು ಎಲ್ಲಾ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ.

ಹೊಸ ನಿಯಮದ ಪ್ರಕಾರ, ಪರಿಶಿಷ್ಟ ಜಾತಿಯ ಒಳಮೀಸಲಾತಿಯನ್ನು ಹೀಗಾಗಿ ಹಂಚಲಾಗಿದೆ:

  • ಪ್ರವರ್ಗ ‘ಎ’ (ದಲಿತ ಎಡಗೈ): ಶೇ.5.25
  • ಪ್ರವರ್ಗ ‘ಬಿ’ (ದಲಿತ ಬಲಗೈ): ಶೇ.5.25
  • ಪ್ರವರ್ಗ ‘ಸಿ’ (ಅಲೆಮಾರಿ, ಅರೆ ಅಲೆಮಾರಿ ಹಾಗೂ ಇತರೆ ಜಾತಿಗಳು): ಶೇ.4.5

ಪ್ರವರ್ಗ ‘ಸಿ’ಯಡಿ ಲಭ್ಯವಾಗುವ ಹುದ್ದೆಗಳಲ್ಲಿ 59 ಅತ್ಯಂತ ಹಿಂದುಳಿದ ಜಾತಿಗಳಿಗೆ ಶೇ.20ರಷ್ಟು ಮೀಸಲಾತಿ ನೀಡಲಾಗುತ್ತದೆ. ಅಭ್ಯರ್ಥಿಗಳು ಲಭ್ಯವಾಗದಿದ್ದಲ್ಲಿ ಆ ಹುದ್ದೆಗಳನ್ನು ಇತರ ಜಾತಿಗಳಿಗೆ ವರ್ಗಾಯಿಸಲಾಗುತ್ತದೆ.

ನೇಮಕಾತಿ ಪ್ರಕ್ರಿಯೆಗಾಗಿ 400-ಬಿಂದು ರೋಸ್ಟರ್ ಪದ್ಧತಿಯನ್ನು ಕಟ್ಟುನಿಟ್ಟಾಗಿ ಅನುಸರಿಸಲು ಸೂಚಿಸಲಾಗಿದೆ. ಕೆಲವು ವೃಂದಗಳಲ್ಲಿ 3ಕ್ಕಿಂತ ಕಡಿಮೆ ಹುದ್ದೆಗಳಿದ್ದರೆ ಅವುಗಳನ್ನು ‘ಪರಿಶಿಷ್ಟ ಜಾತಿ ಸಾಮಾನ್ಯ’ ಎಂದು ಪರಿಗಣಿಸಲಾಗುವುದು.

ಇದೇ ವೇಳೆ, ಹೈಕೋರ್ಟ್‌ನ ಮುಂದಿನ ತೀರ್ಪಿಗೆ ಒಳಪಟ್ಟು ಈ ನೀತಿ ಜಾರಿಯಾಗಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಒಟ್ಟು ಶೇ.24ರ ಮೀಸಲಾತಿ ಒಪ್ಪಿಗೆಯಾದರೆ, ಹೆಚ್ಚುವರಿ ಶೇ.6 ಹುದ್ದೆಗಳನ್ನು ಬ್ಯಾಕ್‌ಲಾಗ್ ಎಂದು ಪರಿಗಣಿಸಲಾಗುತ್ತದೆ.

ಈ ಹೊಸ ವ್ಯವಸ್ಥೆಯಿಂದ ನೇಮಕಾತಿ ಪ್ರಕ್ರಿಯೆ ವೇಗಗೊಳ್ಳಲಿದ್ದು, ಹುದ್ದೆಗಳ ಹಂಚಿಕೆಯಲ್ಲಿ ಸಮಾನ ಅವಕಾಶ ಕಲ್ಪಿಸುವ ಉದ್ದೇಶ ಹೊಂದಿದೆ ಎಂದು ಸರ್ಕಾರ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!