ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಮನನೊಂದ ಮಹಿಳೆಯೊಬ್ಬರು ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ.
ಬೀರೂರು ಠಾಣೆಯ ಸಬ್ ಇನ್ಸ್‌ಪೆಕ್ಟರ್ ತಿಪ್ಪೇಶ್ ಅವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಮತ್ತು ಪದ್ಮ ಪ್ರೀತಿಸಿ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಪದ್ಮ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಕುಟುಂಬಸ್ಥರ ಬರುವಿಕೆಗೆ ಪೊಲೀಸರು ಕಾಯುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



