ಬೆಂಗಳೂರು: ಅಂತರರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆಗಳು, ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಡಾಲರ್ ಮೌಲ್ಯದ ಏರಿಳಿತದ ಪರಿಣಾಮವಾಗಿ ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿದ್ದು, ಬೆಳ್ಳಿ ದರ ಸ್ಥಿರವಾಗಿದೆ ಎಂದು ಗುಡ್ ರಿಟರ್ನ್ಸ್ ವರದಿ ತಿಳಿಸಿದೆ.
ಏಪ್ರಿಲ್ 29, 2026ರಂದು 24 ಕ್ಯಾರೆಟ್ ಚಿನ್ನದ ದರದಲ್ಲಿ 10 ಗ್ರಾಂಗೆ 440 ರೂಪಾಯಿ ಏರಿಕೆಯಾಗಿದ್ದು, ಹೊಸ ಬೆಲೆ 1,51,370 ರೂಪಾಯಿಗೆ ತಲುಪಿದೆ. ಇದೇ ವೇಳೆ 1 ಗ್ರಾಂ ಚಿನ್ನದ ಬೆಲೆಯಲ್ಲಿ 44 ರೂಪಾಯಿ ಹೆಚ್ಚಳವಾಗಿದ್ದು, 15,137 ರೂಪಾಯಿಯಾಗಿ ದಾಖಲಾಗಿದೆ.
22 ಕ್ಯಾರೆಟ್ ಚಿನ್ನದ ದರದಲ್ಲೂ ಏರಿಕೆ ಕಂಡುಬಂದಿದೆ. 1 ಗ್ರಾಂಗೆ 40 ರೂಪಾಯಿ ಹೆಚ್ಚಳವಾಗಿ 13,875 ರೂಪಾಯಿಗೆ ತಲುಪಿದ್ದರೆ, 10 ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂಪಾಯಿ ಏರಿಕೆಯಾಗಿ 1,38,750 ರೂಪಾಯಿಯಾಗಿದೆ.
ಇನ್ನು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಪ್ರತಿ ಗ್ರಾಂ ಬೆಳ್ಳಿ 260 ರೂಪಾಯಿಯಲ್ಲೇ ಸ್ಥಿರವಾಗಿದ್ದು, ಪ್ರತಿ ಕೆಜಿ ಬೆಳ್ಳಿ ಬೆಲೆ 2.60 ಲಕ್ಷ ರೂಪಾಯಿಯಾಗಿದೆ.
ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ, ಜಾಗತಿಕ ಆರ್ಥಿಕ ಅನಿಶ್ಚಿತತೆ ಹಾಗೂ ಡಾಲರ್ ಮೌಲ್ಯದ ಏರಿಳಿತದಿಂದ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆಯಲ್ಲಿ ಭಾರೀ ಚಲನವಲನ ಮುಂದುವರಿದಿದೆ.



