ಬೆಂಗಳೂರು: ಬುಧವಾರ ಸಂಜೆ ಶಿವಾಜಿನಗರದಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ್ದಾರೆ.
ಮಳೆಯ ತೀವ್ರತೆಗೆ ಆಸ್ಪತ್ರೆ ಕಾಂಪೌಂಡ್ ಗೋಡೆ ಅಚಾನಕ್ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದ್ದು, ಸ್ಥಳದಲ್ಲೇ ಹಲವರು ಸಿಲುಕಿಕೊಂಡಿದ್ದರು. ರಕ್ಷಣಾ ಕಾರ್ಯಾಚರಣೆಯ ಬಳಿಕ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ PMNRF ಮೂಲಕ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಘೋಷಿಸಲಾಗಿದೆ.
ಸ್ಥಳದಲ್ಲಿ ಇಂದಿಗೂ ರಕ್ಷಣಾ ಹಾಗೂ ಪರಿಶೀಲನಾ ಕಾರ್ಯ ಮುಂದುವರಿದಿದೆ ಎನ್ನಲಾಗಿದೆ.



