HomeSports NewsIPL 2026: ತವರಲ್ಲಿ ಮುಂಬೈಗೆ ಮತ್ತೆ ಮುಖಭಂಗ; ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ!

IPL 2026: ತವರಲ್ಲಿ ಮುಂಬೈಗೆ ಮತ್ತೆ ಮುಖಭಂಗ; ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ!

For Dai;y Updates Join Our whatsapp Group

Spread the love

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ರಣರೋಚಕ ಪಂದ್ಯ ಅಭಿಮಾನಿಗಳ ಕಣ್ಣಿಗೆ ಹಬ್ಬವಾಗಿದ್ದು, ಸಿಕ್ಸರ್‌–ಬೌಂಡರಿಗಳ ಮಳೆಯ ನಡುವೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

244 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಹೈದರಾಬಾದ್ ತಂಡ 18.4 ಓವರ್‌ಗಳಲ್ಲೇ 249 ರನ್‌ ಕಲೆಹಾಕಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ 12 ಅಂಕಗಳನ್ನು ಸಂಪಾದಿಸಿ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.

ಚೇಸಿಂಗ್ ಆರಂಭಿಸಿದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಜೋಡಿ ಪವರ್ ಪ್ಲೇಯಲ್ಲೇ 92 ರನ್‌ಗಳ ಸ್ಫೋಟಕ ಆರಂಭ ನೀಡಿ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು. ಮೊದಲ ವಿಕೆಟ್‌ಗೆ 8.4 ಓವರ್‌ಗಳಲ್ಲಿ 129 ರನ್‌ಗಳ ಜೊತೆಯಾಟ ನೀಡಿದ ಈ ಜೋಡಿ ಮುಂಬೈ ಬೌಲರ್‌ಗಳನ್ನು ಕಂಗೆಡಿಸಿತು.

ಆದರೆ 9ನೇ ಮತ್ತು 10ನೇ ಓವರ್‌ನಲ್ಲಿ ಹೈದರಾಬಾದ್ ತಂಡ ಮೂರು ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಕ್ಷಣಿಕ ಸಂಕಷ್ಟಕ್ಕೆ ಸಿಲುಕಿತು. ಆದರೂ ನಂತರದಲ್ಲಿ ಹೆನ್ರಿಕ್ ಕ್ಲಾಸೆನ್ ಆಕ್ರಮಣಕಾರಿ ಆಟ ಪ್ರದರ್ಶಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಹೈದರಾಬಾದ್ ಪರ ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 76 ರನ್‌ ಸಿಡಿಸಿದರೆ, ಕ್ಲಾಸೆನ್ 30 ಎಸೆತಗಳಲ್ಲಿ 65 ರನ್‌ ಬಾರಿಸಿದರು. ಸಲೀಲ್ ಅರೋರಾ 30 ರನ್‌, ನಿತೀಶ್ ರೆಡ್ಡಿ 21 ರನ್‌ಗಳ ಕೊಡುಗೆ ನೀಡಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಂಡ ರನ್‌ ಹೊಳೆ ಹರಿಸಿತು. ರಿಕಲ್ಟನ್ ಅಜೇಯ 123 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರೆ, ವಿಲ್ ಜ್ಯಾಕ್ಸ್ 46 ರನ್‌, ಹಾರ್ದಿಕ್ ಪಾಂಡ್ಯ 31 ರನ್‌ ಸೇರಿಸಿ ತಂಡವನ್ನು ಭರ್ಜರಿ ಮೊತ್ತಕ್ಕೆ ಕೊಂಡೊಯ್ದರು.

ಆದರೆ ಬೌಲಿಂಗ್ ವೈಫಲ್ಯದಿಂದ ಮುಂಬೈ ತಂಡಕ್ಕೆ ಸೋಲು ಅನುಭವಿಸಬೇಕಾಯಿತು. ಪಂದ್ಯದಲ್ಲಿ ಎರಡೂ ತಂಡಗಳ ದಿಟ್ಟ ಬ್ಯಾಟಿಂಗ್ ಅಭಿಮಾನಿಗಳಿಗೆ ರಸದೌತಣ ನೀಡಿತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!