ಉದ್ಯಮಿ ಸಂಜಯ್ ಕಪೂರ್ ಅವರ ಆಸ್ತಿ ಹಂಚಿಕೆ ಕುರಿತ ಕುಟುಂಬ ಕಲಹ ಗಂಭೀರ ಹಂತ ತಲುಪಿದ್ದು, ದೆಹಲಿ ಹೈಕೋರ್ಟ್ ಆಸ್ತಿಗಳನ್ನು ಫ್ರೀಜ್ ಮಾಡಲು ಆದೇಶಿಸಿದೆ.
ಕರಿಷ್ಮಾ ಕಪೂರ್ ಅವರ ಮಕ್ಕಳಾದ ಕಿಯಾನ್ ಮತ್ತು ಸಮೈರಾ, ಪ್ರಿಯಾ ಸಚ್‌ದೇವ ಕಪೂರ್ ಸಲ್ಲಿಸಿದ ವಿಲ್ ಹಾಗೂ ಆಸ್ತಿ ವಿವರಗಳ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಹಲವು ಸ್ಥಿರಾಸ್ತಿಗಳು ಮತ್ತು ಅಮೂಲ್ಯ ವರ್ಣಚಿತ್ರಗಳನ್ನು ಪಟ್ಟಿಯಿಂದ ಹೊರಗಿಟ್ಟಿರುವ ಆರೋಪ ಕೇಳಿಬಂದಿದೆ.
ಈ ಹಿನ್ನೆಲೆಯಲ್ಲಿ ಕೋರ್ಟ್, ಎಲ್ಲಾ ಆಸ್ತಿಗಳನ್ನು ಸಂರಕ್ಷಿಸಲು ಹಾಗೂ ಯಾವುದೇ ರೀತಿಯ ವ್ಯವಹಾರಗಳನ್ನು ನಿಲ್ಲಿಸಲು ಸೂಚಿಸಿದೆ. ಜೊತೆಗೆ ವಿದೇಶಿ ಬ್ಯಾಂಕ್ ಖಾತೆಗಳು ಮತ್ತು ಕ್ರಿಪ್ಟೋಕರೆನ್ಸಿ ಹೂಡಿಕೆಗಳ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪ್ರತಿವಾದಿಗಳಿಗೆ ಆದೇಶಿಸಲಾಗಿದೆ.
ಪ್ರಕರಣದ ಅಂತಿಮ ತೀರ್ಪು ಬರುವವರೆಗೆ ಆಸ್ತಿಗಳ ಮೇಲೆ ಕಟ್ಟುನಿಟ್ಟಿನ ನಿಯಂತ್ರಣ ಮುಂದುವರಿಯಲಿದೆ.



