HomeGadag Newsತಿಮ್ಮಾಪೂರಲ್ಲಿ ಕುಡಿಯುವ ನೀರಿಗೆ ಹಾಹಾಕಾರ- ಜೆಜೆಎಂ ಯೋಜನೆ ವೈಫಲ್ಯ..! ವಾರಕ್ಕೊಮ್ಮೆ ನೀರು?

ತಿಮ್ಮಾಪೂರಲ್ಲಿ ಕುಡಿಯುವ ನೀರಿಗೆ ಹಾಹಾಕಾರ- ಜೆಜೆಎಂ ಯೋಜನೆ ವೈಫಲ್ಯ..! ವಾರಕ್ಕೊಮ್ಮೆ ನೀರು?

For Dai;y Updates Join Our whatsapp Group

Spread the love

ಗದಗ:- ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಕುಡಿಯುವ ನೀರಿಗೆ ಪ್ರಮುಖ ಆಧಾರವಾಗಿದ್ದ ಕೆರೆ ಸಂಪೂರ್ಣ ಬತ್ತಿಹೋಗಿದ್ದು, ಗ್ರಾಮ ಪಂಚಾಯಿತಿ ನಿರ್ಲಕ್ಷ್ಯದಿಂದ ಗ್ರಾಮಸ್ಥರು ತೀವ್ರ ನೀರಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೇಸಿಗೆಯ ತಾಪಮಾನ ಹೆಚ್ಚಾಗುತ್ತಿದ್ದಂತೆ ಸಮಸ್ಯೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಗ್ರಾಮಕ್ಕೆ ಕುಡಿಯುವ ನೀರು ಒದಗಿಸಲು ಜಾರಿಗೆ ತಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ (ಜೆಜೆಎಂ) ಅಡಿಯಲ್ಲಿ ತುಂಗಭದ್ರಾ ನದಿಯಿಂದ ನೀರು ಸರಬರಾಜು ಮಾಡುವ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸದೆ, ವಾರಕ್ಕೊಮ್ಮೆ ಮಾತ್ರ ನೀರು ಪೂರೈಕೆ ಆಗುತ್ತಿದೆ. ಇದರಿಂದ ಮೂರು ವಾರ್ಡುಗಳ ಗ್ರಾಮಕ್ಕೆ ಸಿಗುವ ನೀರು ಅತ್ಯಲ್ಪವಾಗಿದ್ದು, ಮನೆ ಬಳಕೆಗೂ ಹಾಗೂ ಪಶುಗಳಿಗೆ ಸಾಕಾಗುತ್ತಿಲ್ಲ.

ಗ್ರಾಮಸ್ಥರು ಹಾಗೂ ಮಹಿಳೆಯರು ಹಲವು ಬಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಿವಲೀಲಾ ಗೂಳಪ್ಪ ಅವರ ಗಮನಕ್ಕೆ ಸಮಸ್ಯೆಯನ್ನು ತಂದರೂ ಯಾವುದೇ ಸ್ಪಷ್ಟ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಿದ್ದಾರೆ. ಅಧಿಕಾರಿಗಳಿಂದ ಕೇವಲ ಭರವಸೆ ಮಾತುಗಳಷ್ಟೇ ಸಿಗುತ್ತಿವೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟ್ಯಾಂಕರ್ ಅವಲಂಬನೆ—ಬಡವರಿಗೆ ಭಾರ:

ಗ್ರಾಮದಲ್ಲಿ ಬೇರೆ ನೀರಿನ ಮೂಲಗಳಿಲ್ಲದ ಕಾರಣ ಜನರು ಖಾಸಗಿ ಟ್ಯಾಂಕರ್ ಮೂಲಕ ಸುಮಾರು ₹1500 ವೆಚ್ಚದಲ್ಲಿ ನೀರು ತರಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದೊಡ್ಡ ಹೊರೆ ಆಗಿದ್ದು, ಕುಡಿಯುವ ನೀರೇ ದುಬಾರಿ ವಸ್ತುವಾಗಿ ಪರಿಣಮಿಸಿದೆ.

ಸರ್ಕಾರದ ಆದೇಶಕ್ಕೂ ಸ್ಪಂದನೆ ಇಲ್ಲ:

ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶಗಳಲ್ಲಿ ನೀರಿನ ಕೊರತೆ ತಡೆಗಟ್ಟಲು ಕೋಟ್ಯಾಂತರ ರೂಪಾಯಿ ಮೀಸಲಿಟ್ಟಿದ್ದರೂ, ತಿಮ್ಮಾಪೂರ ಸೇರಿದಂತೆ ಹಲವೆಡೆ ಸಮಸ್ಯೆ ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡುವಂತೆ ಸೂಚನೆ ನೀಡಿದ್ದರೂ, ಸ್ಥಳೀಯ ಮಟ್ಟದಲ್ಲಿ ಪರಿಣಾಮಕಾರಿ ಕ್ರಮ ಕಾಣಿಸುತ್ತಿಲ್ಲ.

ಒಟ್ಟಾರೆ ಈ ಸಮಸ್ಯೆ ಇದೇ ರೀತಿಯಲ್ಲಿ ಮುಂದುವರಿದರೆ ಗ್ರಾಮಸ್ಥರ ಆಕ್ರೋಶ ತೀವ್ರವಾಗಲಿದೆ ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್. ಬಾಬರಿ, ಹುಚ್ಚೀರಪ್ಪ ಜೋಗಿನ, ಶರಣಪ್ಪ ಜೋಗಿನ, ಬಾಳಪ್ಪ ಗಂಗರಾತ್ರಿ, ಹನುಮಪ್ಪ ತಳವಾರ, ಕಪತ್ತಪ್ಪ ಸೊಂಪೂರ, ರಾಯಣ್ಣ ಕಂಡ್ರಿ, ಗೀರಿಶ ಗುಡ್ಲಾನೂರ ಸೇರಿದಂತೆ ಹಲವರು ಎಚ್ಚರಿಕೆ ನೀಡಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!