HomeKarnataka Newsನಿಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಯತ್ನ; ಚಾಮರಾಜನಗರದಲ್ಲಿ ಪುತ್ರನ ಭೀಕರ ಕೃತ್ಯ ಬಯಲು

ನಿಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಯತ್ನ; ಚಾಮರಾಜನಗರದಲ್ಲಿ ಪುತ್ರನ ಭೀಕರ ಕೃತ್ಯ ಬಯಲು

For Dai;y Updates Join Our whatsapp Group

ಚಾಮರಾಜನಗರ: ಧಿ ಆಸೆಗೆ ಹೆತ್ತ ತಾಯಿಯನ್ನೇ ಬಲಿ ಕೊಡಲು ಪುತ್ರನೊಬ್ಬ ಸಿದ್ಧತೆ ನಡೆಸಿದ್ದ ಆಘಾತಕಾರಿ ಘಟನೆ ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣ ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ್ದು, ಪೊಲೀಸರ ತಕ್ಷಣದ ಕ್ರಮದಿಂದ ದುರಂತ ತಪ್ಪಿದೆ.

ಕೊಂಡಯ್ಯನ ಮಾದಶೆಟ್ಟಿ ಎಂಬಾತ, ಹುಣ್ಣಿಮೆ ದಿನ ಬಲಿ ಕೊಟ್ಟರೆ ನಿಧಿ ಸಿಗುತ್ತದೆ ಎಂಬ ನಂಬಿಕೆಯಲ್ಲಿ, ತನ್ನ 80 ವರ್ಷದ ಕಣ್ಣು ಕಾಣದ ಹಾಗೂ ಕಿವಿ ಕೇಳದ ತಾಯಿ ಮಾದಮ್ಮಶೆಟ್ಟಿಯನ್ನು ಬಲಿಕೊಡಲು ಸಿದ್ಧತೆ ನಡೆಸಿದ್ದಾನೆ. ಬೆಳಗ್ಗಿನ ಜಾವ ತನ್ನ ಮನೆಯಲ್ಲೇ ಸುಮಾರು 4 ಅಡಿ ಆಳದ ಗುಂಡಿ ತೆಗೆದು, ಅದರೊಳಗೆ ಮಡಕೆ ಇಟ್ಟು ಲಿಂಬೆಹಣ್ಣು, ಅರಿಶಿನ, ಕುಂಕುಮ ಹಾಗೂ ಕಳಸವಿಟ್ಟು ಪೂಜೆ ನೆರವೇರಿಸಿದ್ದಾನೆ.

ಈ ಸಂಶಯಾಸ್ಪದ ಚಟುವಟಿಕೆ ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಮಾಟಗಾರ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಿಧಿಗಾಗಿ ಇಂತಹ ಮಾಟ ಮಾಡಿರುವ ವಿಚಾರ ತಿಳಿದು ಸಾಗಡೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಈ ಕುರಿತು ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img