HomeKarnataka Newsವಾಣಿಜ್ಯ ಸಿಲಿಂಡರ್ ದರ ಏರಿಕೆ ಬಡವರ ವಿರೋಧಿ ನೀತಿ: ಕೇಂದ್ರ ಸರ್ಕಾರ ವಿರುದ್ಧ ಸಚಿವ ಈಶ್ವರ್...

ವಾಣಿಜ್ಯ ಸಿಲಿಂಡರ್ ದರ ಏರಿಕೆ ಬಡವರ ವಿರೋಧಿ ನೀತಿ: ಕೇಂದ್ರ ಸರ್ಕಾರ ವಿರುದ್ಧ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ

For Dai;y Updates Join Our whatsapp Group

Spread the love

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಮತದಾನ ಮುಗಿದ ತಕ್ಷಣವೇ ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಏರಿಕೆ ಮಾಡಿರುವುದು ಬಡವರ ವಿರೋಧಿ ನೀತಿಯ ಮತ್ತೊಂದು ಉದಾಹರಣೆ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ್ ಖಂಡ್ರೆ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ 1ರಿಂದ ವಾಣಿಜ್ಯ ಅಡುಗೆ ಅನಿಲ ಸಿಲಿಂಡರ್ ದರದಲ್ಲಿ ಸುಮಾರು 1,300 ರೂಪಾಯಿ ಏರಿಕೆಯಾಗಿದೆ ಎಂದು ಆರೋಪಿಸಿದರು.

“ಈ ದರ ಏರಿಕೆಯಿಂದ ಹೋಟೆಲ್ ಮಾಲೀಕರು ಅನಿವಾರ್ಯವಾಗಿ ಊಟ, ತಿಂಡಿ, ಕಾಫಿ ಮತ್ತು ಟೀ ದರವನ್ನು ಹೆಚ್ಚಿಸಬೇಕಾಗುತ್ತದೆ. ಇದರ ನೇರ ಹೊರೆ ಸಾಮಾನ್ಯ ಜನರ ಮೇಲೇ ಬೀಳಲಿದೆ. ಮತದಾನ ಮುಗಿದ ಕೂಡಲೇ ಬಡ ಹಾಗೂ ಮಧ್ಯಮ ವರ್ಗದ ಬದುಕನ್ನು ಇನ್ನಷ್ಟು ದುರ್ಬರಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ,” ಎಂದು ಖಂಡ್ರೆ ಟೀಕಿಸಿದರು.

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಪರಿಣಾಮ ಸಮರ್ಪಕವಾಗಿ ಅಡುಗೆ ಅನಿಲ ಪೂರೈಕೆ ಆಗದೆ ಹಲವು ಹೋಟೆಲ್‌ಗಳು ಈಗಾಗಲೇ ಬಂದ್ ಆಗಿದ್ದು, ಅನೇಕ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲೇ ಪ್ರತಿ ಸಿಲಿಂಡರ್‌ಗೆ 993 ರೂಪಾಯಿ ಹೆಚ್ಚಳ ಮಾಡಿರುವುದು ಕಾರ್ಮಿಕ ದಿನಾಚರಣೆಯಂದೇ ಕಾರ್ಮಿಕ ವಿರೋಧಿ ನಿಲುವು ಪ್ರದರ್ಶಿಸಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಟೋ ಚಾಲಕರಿಗೂ ಸಿಎನ್‌ಜಿ ಕೊರತೆಯಿಂದ ತೀವ್ರ ತೊಂದರೆ ಎದುರಾಗಿದ್ದು, ಗಂಟೆಗಟ್ಟಲೆ ಸರತಿಯಲ್ಲಿ ನಿಂತರೂ ಅನಿಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇಂತಹ ಸಂದರ್ಭದಲ್ಲೂ ಕೇಂದ್ರ ಸರ್ಕಾರ ಮತ್ತಷ್ಟು ಹೊರೆ ಹಾಕಿದೆ ಎಂದು ಖಂಡ್ರೆ ಆರೋಪಿಸಿದರು.

ಯುಪಿಎ ಆಡಳಿತಾವಧಿಯಲ್ಲಿ ಅಡುಗೆ ಅನಿಲ ದರ 10ರಿಂದ 15 ರೂಪಾಯಿ ಹೆಚ್ಚಾದರೂ ದೊಡ್ಡ ಮಟ್ಟದಲ್ಲಿ ಟೀಕೆ ಮಾಡುತ್ತಿದ್ದ ಬಿಜೆಪಿ ನಾಯಕರು, ಈಗ ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ತಮ್ಮ ನಿಲುವು ಸ್ಪಷ್ಟಪಡಿಸಲಿ ಎಂದು ಸವಾಲು ಹಾಕಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!