ಬೆಂಗಳೂರು: ಡಾ. ರಾಜ್‌ಕುಮಾರ್ ಸಮಾಧಿ ಜಾಗದ ವಿವಾದ ಇದೀಗ ಕಾನೂನು ಹಂತ ತಲುಪಿದೆ. ನಟ ಚೇತನ್ ಅಹಿಂಸಾ ನೀಡಿದ ದೂರಿನ ಆಧಾರದ ಮೇಲೆ ನಿರ್ಮಾಪಕ ಸಾ.ರಾ ಗೋವಿಂದು ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಈ ಪ್ರಕರಣದಲ್ಲಿ ಬೆದರಿಕೆ, ಮನೆ ಮುಂದೆ ಗಲಾಟೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪಗಳು ಸೇರಿವೆ.
ಚೇತನ್ ಅವರ ಪ್ರಕಾರ, ಸಾಮಾಜಿಕ ಜಾಲತಾಣದ ಪೋಸ್ಟ್ ಪ್ರಶ್ನಿಸಿ ಕೆಲವರು ಮನೆಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. “ಸಾ.ರಾ ಗೋವಿಂದು ಅವರ ನಡೆ ದುರಹಂಕಾರ ಹಾಗೂ ಗೂಂಡಾಗಿರಿ ತೋರಿಸುತ್ತದೆ” ಎಂದು ಅವರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹಲವು ಸಂಘಟನೆಗಳು ಸೇರಿ ದಾಖಲೆ ಸಮೇತ ದೂರು ಸಲ್ಲಿಸಿರುವುದಾಗಿ ಚೇತನ್ ತಿಳಿಸಿದ್ದಾರೆ.
ಘಟನೆ ಇದೀಗ ಸಿನಿ ವಲಯದ ವಿವಾದವನ್ನು ಕಾನೂನು ಹೋರಾಟದ ಹಂತಕ್ಕೆ ತಳ್ಳಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.



