ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಸಂಭವಿಸಿದ ದುರ್ಘಟನೆ ಅತ್ಯಂತ ದುಃಖಕರವಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಜಾತ್ರೆಯ ಆಟದ ಮಾಲೀಕರನ್ನು ತಕ್ಷಣ ಬಂಧಿಸಬೇಕು. ಜೊತೆಗೆ, ಗಾಯಗೊಂಡವರಿಗೆ ಸಮರ್ಪಕ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ದುರ್ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆಹಚ್ಚಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಬೇಕು ಎಂದು ತಿಳಿಸಿದ್ದಾರೆ.
ಇದಲ್ಲದೆ, ಶ್ರೀ ತೋಂಟದ ಮಹಾ ಸಿದ್ಧಲಿಂಗ ಸ್ವಾಮಿಗಳ ಮಠದೊಂದಿಗೆ ಸಂಪೂರ್ಣ ಬೆಂಬಲವಾಗಿ ತಾವು ನಿಂತಿರುವುದಾಗಿ ಸೈಯದ್ ಖಾಲಿದ್ ಕೊಪ್ಪಳ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.



