HomeKarnataka Newsರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ! ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್​ ಘೋಷಣೆ

ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆ! ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್​ ಘೋಷಣೆ

For Dai;y Updates Join Our whatsapp Group

Spread the love

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆ ತೀವ್ರವಾಗುವ ನಿರೀಕ್ಷೆಯಿದೆ.

ಕರಾವಳಿ ಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೂಡ ಗುಡುಗು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇದೆ.

ಮೇ 7 ಮತ್ತು 8ರಂದು ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಉಳಿದ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ.

ಇತ್ತ ಮೈಸೂರು ಜಿಲ್ಲೆಯಲ್ಲಿ ಮಳೆ ಮತ್ತು ಗಾಳಿಯ ಆರ್ಭಟ ಮುಂದುವರಿದಿದ್ದು, ಹುಣಸೂರು ತಾಲ್ಲೂಕಿನ ಬಿಳಿಕೆರೆ–ಮನುಗನಹಳ್ಳಿ ಮಧ್ಯೆ ಬೃಹತ್ ಮರ ಬಿದ್ದು ಮೈಸೂರು–ಹುಣಸೂರು ಮುಖ್ಯ ರಸ್ತೆಯಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ವಾಹನ ಸವಾರರು ಪರದಾಡುವಂತಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!