HomeKarnataka Newsಸೈಕಲ್ ಸವಾರಿ ವೇಳೆ ಗೂಡ್ಸ್ ವಾಹನ ಡಿಕ್ಕಿ: ಬೇಸಿಗೆ ರಜೆಗೆ ತಾತನ ಮನೆಗೆ ಬಂದಿದ್ದ ಬಾಲಕನ...

ಸೈಕಲ್ ಸವಾರಿ ವೇಳೆ ಗೂಡ್ಸ್ ವಾಹನ ಡಿಕ್ಕಿ: ಬೇಸಿಗೆ ರಜೆಗೆ ತಾತನ ಮನೆಗೆ ಬಂದಿದ್ದ ಬಾಲಕನ ದುರ್ಮರಣ!

For Dai;y Updates Join Our whatsapp Group

Spread the love

ಚಾಮರಾಜನಗರ: ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಾತನ ಮನೆಗೆ ಬಂದಿದ್ದ 11 ವರ್ಷದ ಬಾಲಕ ಸೈಕಲ್ ಸವಾರಿ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಳ್ಳೇಗಾಲ ತಾಲೂಕಿನ ಹರಳೆ–ಅಣಗಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ.

ಮೃತ ಬಾಲಕನನ್ನು ಬೆಂಗಳೂರಿನ ನಿವಾಸಿ ಆನಂದ್ರಾಜ್ ಅವರ ಪುತ್ರ ಯಶವಂತ್ ಎಂದು ಗುರುತಿಸಲಾಗಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಯಶವಂತ್ ಅಣಗಳ್ಳಿ ಗ್ರಾಮದ ತನ್ನ ತಾತ ಶಿವಲಿಂಗಯ್ಯ ಅವರ ಮನೆಗೆ ಬಂದಿದ್ದ. ಮಂಗಳವಾರ ಬೆಳಗ್ಗೆ ಆಟವಾಡಲು ಕುಟುಂಬಸ್ಥರು ಸೈಕಲ್ ನೀಡಿದ್ದರು.

ಸೈಕಲ್ ಸವಾರಿ ಮಾಡುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಪವಿಭಾಗ ಆಸ್ಪತ್ರೆಗೆ ರವಾನಿಸಲಾಗಿದೆ.

ಪೊಲೀಸರು ಗೂಡ್ಸ್ ವಾಹನ ಹಾಗೂ ಸೈಕಲ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿಸಿದ್ದಾರೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ಆವರಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!