HomeKarnataka Newsಅಕಾಲಿಕ ಮಳೆಯಿಂದ ಹಾನಿ: ವಿದ್ಯುತ್ ಕಂಬಗಳ ತುರ್ತು ದುರಸ್ತಿಗೆ ಎಸ್.ಆರ್. ಪಾಟೀಲ ಸೂಚನೆ!

ಅಕಾಲಿಕ ಮಳೆಯಿಂದ ಹಾನಿ: ವಿದ್ಯುತ್ ಕಂಬಗಳ ತುರ್ತು ದುರಸ್ತಿಗೆ ಎಸ್.ಆರ್. ಪಾಟೀಲ ಸೂಚನೆ!

For Dai;y Updates Join Our whatsapp Group

Spread the love

ಧಾರವಾಡ:- ಜಿಲ್ಲೆಯಲ್ಲಿ ಸಂಭವಿಸಿದ ಅಕಾಲಿಕ ಮಳೆ ಹಾಗೂ ಬಿರುಗಾಳಿಯಿಂದಾಗಿ ಹಲವೆಡೆ ವಿದ್ಯುತ್ ಕಂಬಗಳು ಬಿದ್ದು, ತಂತಿಗಳು ಹಾನಿಗೊಳಗಾದ ಘಟನೆಗಳು ವರದಿಯಾಗಿವೆ.

ಈ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆ ತಕ್ಷಣ ಕ್ರಮ ಕೈಗೊಂಡು ದುರಸ್ತಿಯನ್ನು ಕೈಗೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಸೂಚಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿದ್ದಿರುವ ಕಂಬಗಳನ್ನು ತಕ್ಷಣ ಸರಿಪಡಿಸಿ ರೈತರ ಕೃಷಿ ಕಾರ್ಯಕ್ಕೆ ತೊಂದರೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಂಗನವಾಡಿ ಕೇಂದ್ರಗಳು, ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಆವರಣಗಳಲ್ಲಿ ವಾಲಿರುವ ವಿದ್ಯುತ್ ಕಂಬಗಳನ್ನು ಮಕ್ಕಳ ಸುರಕ್ಷತೆ ದೃಷ್ಟಿಯಿಂದ ತಕ್ಷಣ ಸ್ಥಳಾಂತರಿಸಬೇಕು. ಇಂತಹ ಸಮಸ್ಯೆಗಳು ಕಂಡುಬಂದರೆ ತಕ್ಷಣ ಸಂಬಂಧಿತ ಇಲಾಖೆಯ ಗಮನಕ್ಕೆ ತರಬೇಕು ಎಂದು ಹೇಳಿದರು.

ಯುವನಿಧಿ ಯೋಜನೆ ಕುರಿತು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕೋಚಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಯೋಜನೆಯ ಮಾಹಿತಿ ನೀಡಬೇಕು. ಸಭೆಗಳು, ಮಾಹಿತಿ ಶಿಬಿರಗಳ ಮೂಲಕ ಅರ್ಜಿ ಸಲ್ಲಿಕೆ ವಿಧಾನ ಹಾಗೂ ಅರ್ಹತೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಸೂಚಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಯುವನಿಧಿ ಫಲಾನುಭವಿಗಳಿಗಾಗಿ ಟೆಲಿಗ್ರಾಂ ಗುಂಪುಗಳನ್ನು ರಚಿಸಿ ತರಬೇತಿ ಹಾಗೂ ಇತರ ಮಾಹಿತಿಗಳನ್ನು ಹಂಚಿಕೊಳ್ಳುವಂತೆ ಸೂಚಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಮಾಹಿತಿ ಸ್ಟಾಲ್‌ಗಳನ್ನು ಅಳವಡಿಸಿ ಯೋಜನೆಗಳ ಬಗ್ಗೆ ಸ್ಪಷ್ಟ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ಮುರಗಯ್ಯಾ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹಾನ್ ರಝಾ ಐನಾಪೂರಿ, ರತ್ನಾ ತೇಗೂರಮಠ ಸೇರಿದಂತೆ ಹಲವು ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ:-

ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ.

ಯುವನಿಧಿ: 11,985 ಅರ್ಜಿಗಳು; 9,780 ಫಲಾನುಭವಿಗಳಿಗೆ ಡಿಬಿಟಿ ಮೂಲಕ ರೂ. 27.60 ಕೋಟಿ ಜಮೆ

ಶಕ್ತಿ ಯೋಜನೆ: 5,988.44 ಲಕ್ಷ ಮಹಿಳೆಯರು ಉಚಿತ ಪ್ರಯಾಣ; ರೂ. 1,52,158.52 ಲಕ್ಷ ಬಿಡುಗಡೆ

ಗೃಹ ಜ್ಯೋತಿ: 5,10,864 ಫಲಾನುಭವಿಗಳು; ರೂ. 72,951.16 ಲಕ್ಷ ಬಿಡುಗಡೆ

ಗೃಹಲಕ್ಷ್ಮಿ: 4,03,696 ಫಲಾನುಭವಿಗಳು; ರೂ. 2,119.22 ಕೋಟಿ ಬಿಡುಗಡೆ

ಅನ್ನಭಾಗ್ಯ: 3,62,516 ಫಲಾನುಭವಿಗಳು; ರೂ. 358.28 ಲಕ್ಷ ಬಿಡುಗಡೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!