HomeKarnataka Newsಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ದುರಂತ: ವಿಧವೆಯ ಮೇಲೆ ಹೊರಗುತ್ತಿಗೆ ನೌಕರನಿಂದ ಅತ್ಯಾಚಾರ?

ಬಾಗಲಕೋಟೆ ಜಿಲ್ಲಾಸ್ಪತ್ರೆಯಲ್ಲಿ ದುರಂತ: ವಿಧವೆಯ ಮೇಲೆ ಹೊರಗುತ್ತಿಗೆ ನೌಕರನಿಂದ ಅತ್ಯಾಚಾರ?

For Dai;y Updates Join Our whatsapp Group

Spread the love

ಬಾಗಲಕೋಟೆ: ನಗರದ ಜಿಲ್ಲಾಸ್ಪತ್ರೆಯಲ್ಲಿ ಮನಕಲಕುವ ಹಾಗೂ ಆಕ್ರೋಶ ಹುಟ್ಟಿಸುವ ಘಟನೆ ಬೆಳಕಿಗೆ ಬಂದಿದೆ.

ಆಸ್ಪತ್ರೆಯ ಬಾತ್‌ರೂಮ್‌ನಲ್ಲಿ ವಿಧವೆಯ ಮೇಲೆ ಹೊರಗುತ್ತಿಗೆ ನೌಕರನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಆರೋಪಿಯನ್ನು ಫರೀದ್ ಸಾಬ್ ಡಾಂಗಿ ಎಂದು ಗುರುತಿಸಲಾಗಿದೆ. ಆಸ್ಪತ್ರೆಯಲ್ಲಿ ಡಿ-ದರ್ಜೆ ನೌಕರನಾಗಿ ಕೆಲಸ ಮಾಡುತ್ತಿದ್ದ ಆತ, ಚಿಕಿತ್ಸೆ ಪಡೆಯುತ್ತಿದ್ದ ರೋಗಿಯೊಬ್ಬರ ಸಹೋದರಿಯ ಮೇಲೆ ಈ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ.

34 ವರ್ಷದ ಸಂತ್ರಸ್ತೆ ತನ್ನ ಅನಾರೋಗ್ಯ ಪೀಡಿತ ಸಹೋದರನ ಆರೈಕೆಗಾಗಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲೇ ತಂಗಿದ್ದಳು. ಈ ಅವಧಿಯಲ್ಲಿ ಆರೋಪಿಯು ಆಕೆಯೊಂದಿಗೆ ಪರಿಚಯ ಮಾಡಿಕೊಂಡಿದ್ದನು. ಮೇ 4ರ ಮಧ್ಯರಾತ್ರಿ 12ರಿಂದ 2 ಗಂಟೆಯ ನಡುವೆ ಆಕೆಗೆ ಬೆದರಿಕೆ ಹಾಕಿ, ಸಿಬ್ಬಂದಿ ಬಳಕೆ ಬಾತ್‌ರೂಮ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆ ಬಳಿಕ ಸಂತ್ರಸ್ತೆಯನ್ನು ಒಳಗೆ ಬಂದಿಸಿ ಆರೋಪಿಯು ಸ್ಥಳದಿಂದ ತೆರಳಿದ್ದಾನೆ ಎನ್ನಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸಂಬಂಧ ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿತ ಕಾನೂನು ವಿಧಿಗಳಡಿ ತನಿಖೆ ನಡೆಯುತ್ತಿದೆ.

ಘಟನೆಯ ಬಳಿಕ ಜಿಲ್ಲಾಸ್ಪತ್ರೆಯ ಸರ್ಜನ್ ಮಹೇಶ್ ಕೋಣಿ ಅವರು ಆರೋಪಿಯನ್ನು ತಕ್ಷಣವೇ ಕೆಲಸದಿಂದ ವಜಾಗೊಳಿಸಿದ್ದಾರೆ.

ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಸಂತ್ರಸ್ತೆಯ ಕುಟುಂಬಸ್ಥರು, “ಜಿಲ್ಲಾಸ್ಪತ್ರೆ ಬಡವರ ದೇವಾಲಯದಂತಿರಬೇಕು, ಆದರೆ ಇಲ್ಲಿ ಮಹಿಳೆಯರಿಗೂ ಸುರಕ್ಷತೆ ಇಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಅವರು ಆಗ್ರಹಿಸಿದ್ದಾರೆ.

 


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!