ನೆಲಮಂಗಲ: ತಾಲೂಕಿನ ಡಾಬಸ್‌ಪೇಟೆ ಅಂಚೆಮನೆ ಗೇಟ್ ಬಳಿ ಇರುವ ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸರಣಿ ಅಪಘಾತ ಸಂಭವಿಸಿದೆ.
ಬೈಕ್, ಎರಡು ಕಾರು, ಲಾರಿ, ಬಸ್ ಹಾಗೂ ಪಿಕಪ್ ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಪಿಕಪ್ ವಾಹನ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನಗಳು ಭಾರೀ ಹಾನಿಗೊಳಗಾಗಿವೆ.
ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಅಪಘಾತದ ಪರಿಣಾಮ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.



