HomeKarnataka Newsರಾಜ್ಯದಲ್ಲಿ ಮಳೆ ಎಚ್ಚರಿಕೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಲಿಕಲ್ಲು ಮಳೆಯ ಸಾಧ್ಯತೆ!

ರಾಜ್ಯದಲ್ಲಿ ಮಳೆ ಎಚ್ಚರಿಕೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಲಿಕಲ್ಲು ಮಳೆಯ ಸಾಧ್ಯತೆ!

For Dai;y Updates Join Our whatsapp Group

Spread the love

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಕೆಲವೆಡೆ ಆಲಿಕಲ್ಲು ಮಳೆಯ ಸಾಧ್ಯತೆ ಇರುವುದರಿಂದ ಎಚ್ಚರಿಕೆ ನೀಡಲಾಗಿದೆ.

ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದ್ದರೆ, ಉತ್ತರ ಕನ್ನಡದಲ್ಲಿ ಶುಷ್ಕ ವಾತಾವರಣ ಮುಂದುವರಿಯಲಿದೆ.

ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆ ವ್ಯಕ್ತವಾಗಿದೆ.

ಮೇ 7 ಮತ್ತು 8 ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಚಟುವಟಿಕೆ ಮುಂದುವರಿಯಲಿದ್ದು, ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!