HomeSports NewsIPL 2026: ಇಂದು ಲಕ್ನೋ–ಆರ್‌ಸಿಬಿ ಹೈವೋಲ್ಟೇಜ್ ಮ್ಯಾಚ್; ಉಭಯ ತಂಡಗಳ ಮುಖಾಮುಖಿ ದಾಖಲೆ ಹೇಗಿದೆ?

IPL 2026: ಇಂದು ಲಕ್ನೋ–ಆರ್‌ಸಿಬಿ ಹೈವೋಲ್ಟೇಜ್ ಮ್ಯಾಚ್; ಉಭಯ ತಂಡಗಳ ಮುಖಾಮುಖಿ ದಾಖಲೆ ಹೇಗಿದೆ?

For Dai;y Updates Join Our whatsapp Group

Spread the love

ಇಂಡಿಯನ್ ಪ್ರೀಮಿಯರ್ ಲೀಗ್ 2026ರ 50ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ.

ಈ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದಕ್ಕೂ ಮುನ್ನ ಏಪ್ರಿಲ್ 15ರಂದು ನಡೆದ ಪಂದ್ಯದಲ್ಲಿ ಆರ್‌ಸಿಬಿ ರಜತ್ ಪಾಟಿದಾರ್ ಅವರ ಅದ್ಭುತ ಬ್ಯಾಟಿಂಗ್ ನೆರವಿನಿಂದ ಲಕ್ನೋ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿತ್ತು. ಇದೀಗ ಮತ್ತೊಮ್ಮೆ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದರಿಂದ ಪಂದ್ಯಕ್ಕೆ ಹೆಚ್ಚಿನ ಕುತೂಹಲ ಸೃಷ್ಟಿಯಾಗಿದೆ.

ಲಕ್ನೋ ಸೂಪರ್ ಜೈಂಟ್ಸ್ ಈ ಸೀಸನ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದು, ಆಡಿದ 9 ಪಂದ್ಯಗಳಲ್ಲಿ 7ರಲ್ಲಿ ಸೋತು ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಸತತ ಸೋಲುಗಳಿಂದ ತಂಡದ ಪ್ಲೇಆಫ್ ಕನಸು ಬಹುತೇಕ ಅಂತ್ಯಗೊಂಡಂತಾಗಿದೆ.

ಇದಕ್ಕೆ ವಿರುದ್ಧವಾಗಿ ಆರ್‌ಸಿಬಿ ಉತ್ತಮ ಫಾರ್ಮ್‌ನಲ್ಲಿ ಇದ್ದು, 9 ಪಂದ್ಯಗಳಲ್ಲಿ 6 ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ಲೇಆಫ್ ಸ್ಥಾನವನ್ನು ಇನ್ನಷ್ಟು ಭದ್ರಪಡಿಸಿಕೊಳ್ಳುವ ಗುರಿಯೊಂದಿಗೆ ಆರ್‌ಸಿಬಿ ಮೈದಾನಕ್ಕಿಳಿಯಲಿದೆ.

ಹೆಡ್-ಟು-ಹೆಡ್ ದಾಖಲೆಗಳಲ್ಲೂ ಆರ್‌ಸಿಬಿಗೆ ಮೇಲುಗೈ ಇದ್ದು, ಆಡಿದ 7 ಪಂದ್ಯಗಳಲ್ಲಿ 5ರಲ್ಲಿ ಜಯ ಸಾಧಿಸಿದೆ.

ಎರಡೂ ತಂಡಗಳಿಗೂ ಪ್ರಮುಖ ಆಟಗಾರರ ಬಲವಿದ್ದು, ಇಂದು ನಡೆಯಲಿರುವ ಪಂದ್ಯ ಹೈವೋಲ್ಟೇಜ್ ಕಾದಾಟವಾಗುವ ನಿರೀಕ್ಷೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!