HomeIndia Newsಹಂಟು ವೈರಸ್ ಆತಂಕ: ಸೋಂಕಿತ ಹಡಗಿನಲ್ಲಿ ಇಬ್ಬರು ಭಾರತೀಯರು

ಹಂಟು ವೈರಸ್ ಆತಂಕ: ಸೋಂಕಿತ ಹಡಗಿನಲ್ಲಿ ಇಬ್ಬರು ಭಾರತೀಯರು

For Dai;y Updates Join Our whatsapp Group

Spread the love

ನವದೆಹಲಿ: ಕೊರೋನಾ ಮಾದರಿಯ ಹಂಟು ವೈರಸ್ ಸೋಂಕು ಪತ್ತೆಯಾಗಿರುವ ಹಡಗಿನಲ್ಲಿ ಇಬ್ಬರು ಭಾರತೀಯ ಸಿಬ್ಬಂದಿ ಇದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆತಂಕ ಹೆಚ್ಚಾಗಿದೆ. ಅರ್ಜೆಂಟೀನಾದಿಂದ ಸ್ಪೇನ್‌ಗೆ ಪ್ರಯಾಣಿಸುತ್ತಿದ್ದ ನೌಕೆಯಲ್ಲಿ ಹಲವು ಪ್ರಯಾಣಿಕರಿಗೆ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು.

150ಕ್ಕೂ ಹೆಚ್ಚು ಜನರಿದ್ದ ಹಡಗಿನಲ್ಲಿ ಮಧ್ಯದಲ್ಲೇ ಹಲವರು ಇಳಿದಿದ್ದು, ಉಳಿದವರಲ್ಲಿ ಎಂಟು ಮಂದಿಗೆ ಸೋಂಕಿನ ಶಂಕೆ ವ್ಯಕ್ತವಾಗಿತ್ತು. ಬಳಿಕ ಐದು ಮಂದಿಯಲ್ಲಿ ಹಂಟು ವೈರಸ್ ದೃಢಪಟ್ಟಿದ್ದು, ಮೂವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದೇ ನೌಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಭಾರತೀಯರ ಆರೋಗ್ಯ ಸ್ಥಿತಿ ಕುರಿತು ಇನ್ನೂ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಮೇ 10ರಂದು ಹಡಗು ಸ್ಪೇನ್ ತಲುಪಿದ ಬಳಿಕ ವೈದ್ಯಕೀಯ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಈ ನಡುವೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ರಾಷ್ಟ್ರೀಯ ನರವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ನವೀನ್ ಕುಮಾರ್ ಮಾತನಾಡಿ, “ಹಂಟು ವೈರಸ್ ಕೊರೋನಾವಿನಂತೆ ವ್ಯಕ್ತಿಯಿಂದ ವ್ಯಕ್ತಿಗೆ ವೇಗವಾಗಿ ಹರಡುವ ಸೋಂಕಲ್ಲ. ಸೋಂಕಿತ ದಂಶಕಗಳ ಮಲ, ಮೂತ್ರ ಅಥವಾ ಲಾಲಾರಸದ ಸಂಪರ್ಕದಿಂದ ಮಾತ್ರ ಹರಡುತ್ತದೆ” ಎಂದು ತಿಳಿಸಿದ್ದಾರೆ.

ಹಂಟು ವೈರಸ್ ಸಾಮಾನ್ಯವಾಗಿ ಇಲಿಗಳಂತಹ ದಂಶಕಗಳಿಂದ ಹರಡುವ ಸೋಂಕಾಗಿದ್ದು, ಗಂಭೀರ ಉಸಿರಾಟ ಸಮಸ್ಯೆಗೆ ಕಾರಣವಾಗಬಹುದು. ಜ್ವರ, ದಣಿವು, ಉಸಿರಾಟದ ತೊಂದರೆ, ಒಣ ಕೆಮ್ಮು, ಸ್ನಾಯು ನೋವು, ವಾಂತಿ ಮತ್ತು ಅತಿಸಾರ ಪ್ರಮುಖ ಲಕ್ಷಣಗಳಾಗಿವೆ. ಸೋಂಕು ತೀವ್ರವಾದರೆ ಶ್ವಾಸಕೋಶ ಹಾಗೂ ಮೂತ್ರಪಿಂಡಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!