ಮಂಗಳೂರು: ಮಂಗಳೂರಿನ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಸಮೀಪದ ಗುಂಡ್ಯಹೊಳೆಯಲ್ಲಿ ಸಂಭವಿಸಿದ ದುರಂತದಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸ್ನಾನಕ್ಕೆಂದು ನದಿಗೆ ತೆರಳಿದ್ದ ನಾಲ್ವರಲ್ಲಿ ಸುನೀತಾ (21) ಮತ್ತು ಅರ್ಪಿತಾ (15) ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದಾರೆ. ಮೃತರು ಕುಟ್ರುಪ್ಪಾಡಿ ನಿವಾಸಿಗಳಾಗಿದ್ದು, ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ ಎನ್ನಲಾಗಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



