HomeKarnataka Newsಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಕರ ಘಟನೆ: 8 ವರ್ಷದ ಬಾಲಕ ಚಿರತೆಗೆ ಬಲಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಭೀಕರ ಘಟನೆ: 8 ವರ್ಷದ ಬಾಲಕ ಚಿರತೆಗೆ ಬಲಿ

For Dai;y Updates Join Our whatsapp Group

Spread the love

ಚಾಮರಾಜನಗರ: ಜಿಲ್ಲೆಯ ಪವಿತ್ರ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಮತ್ತೆ ಭೀಕರ ಘಟನೆ ಸಂಭವಿಸಿದೆ.

ನರಭಕ್ಷಕ ಚಿರತೆಯ ದಾಳಿಗೆ ಬೆಂಗಳೂರು ಮೂಲದ 8 ವರ್ಷದ ಬಾಲಕ ಹರ್ಷಿತ್ ದುರ್ಮರಣಕ್ಕೀಡಾದ ಘಟನೆ ಇಂದು ಮುಂಜಾನೆ ನಡೆದಿದೆ.

ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆ ಕಡೆಗೆ ಪಾದಯಾತ್ರೆ ಕೈಗೊಂಡಿದ್ದ ವೇಳೆ, ಸುಮಾರು ಬೆಳಿಗ್ಗೆ 7 ಗಂಟೆ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ಈ ದುರ್ಘಟನೆ ನಡೆದಿದೆ. ಪೊದೆಯಲ್ಲಿ ಹೊಂಚು ಹಾಕಿದ್ದ ಚಿರತೆ ಕ್ಷಣಾರ್ಧದಲ್ಲಿ ಬಾಲಕನ ಮೇಲೆ ದಾಳಿ ಮಾಡಿ ಕಾಡಿನೊಳಗೆ ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ.

ಕುಟುಂಬಸ್ಥರು ಕಿರುಚಾಡಿ ರಕ್ಷಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ನಂತರ ಸ್ಥಳೀಯರು ಹಾಗೂ ಅರಣ್ಯ ಸಿಬ್ಬಂದಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ಪತ್ತೆಯಾಗಿದೆ. ಚಿರತೆ ದಾಳಿಯಿಂದ ದೇಹದ ಕೆಲವು ಭಾಗಗಳು ಹಾನಿಗೊಂಡಿರುವುದು ಕಂಡುಬಂದಿದೆ ಎಂದು ವರದಿಯಾಗಿದೆ.

ಮಲೆ ಮಹದೇಶ್ವರ ಬೆಟ್ಟ ಹಾಗೂ ಸುತ್ತಮುತ್ತಲಿನ ಕಾಡಂಚು ಪ್ರದೇಶಗಳಲ್ಲಿ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿಂದೆ ಕೂಡ ಇದೇ ಪ್ರದೇಶದಲ್ಲಿ ಚಿರತೆ ದಾಳಿಗೆ ಹಲವು ಜೀವಗಳು ಬಲಿಯಾಗಿದ್ದವು.

ಈ ಘಟನೆಯಿಂದ ಯಾತ್ರಾರ್ಥಿಗಳಲ್ಲಿ ಭೀತಿ ಹೆಚ್ಚಿದ್ದು, ಅರಣ್ಯ ಇಲಾಖೆ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಬೇಕೆಂಬ ಒತ್ತಾಯ ಕೇಳಿಬರುತ್ತಿದೆ. ಅರಣ್ಯ ಇಲಾಖೆ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!